ETV Bharat / state

ಬಾಣಂತಿ ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳದ ಪ್ರಕರಣ: ವೈದ್ಯರು ಸೇರಿ ಇಬ್ಬರು ದಾದಿಯರು ಅಮಾನತು - ಈಟಿವಿ ಭಾರತ ಕನ್ನಡ ನ್ಯೂಸ್​​

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಘಟನೆ ಸಂಬಂಧ ಕರ್ತವ್ಯದಲ್ಲಿದ್ದ ಡಾಕ್ಟರ್​​ ಹಾಗೂ ಇಬ್ಬರು ದಾದಿಯರನ್ನು ಅಮಾನತುಗೊಳಿಸಲಾಗಿದೆ.

doctor-suspended-in-mother-died-case-in-tumkur
ಬಾಣಂತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳದ ಪ್ರಕರಣ : ವೈದ್ಯರು ಸೇರಿ ಇಬ್ಬರು ದಾದಿಯರು ಅಮಾನತು
author img

By

Published : Nov 3, 2022, 7:02 PM IST

Updated : Nov 3, 2022, 10:50 PM IST

ತುಮಕೂರು : ನಗರದಲ್ಲಿ ಬಾಣಂತಿ ಹಾಗೂ ಅವಳಿ ಮಕ್ಕಳು ಅಸುನೀಗಿದ ಹೃದಯ ವಿದ್ರಾವಕ ಘಟನೆ ಸಂಬಂಧ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಬಾಣಂತಿ ಆಸ್ಪತ್ರೆಗೆ ದಾಖಲಿಸಿಕೊಳ್ಳದ ವೈದ್ಯರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ಕರ್ತವ್ಯದಲ್ಲಿದ್ದ ಡಾಕ್ಟರ್​ ಹಾಗೂ ಸಿಬ್ಬಂದಿ ಅಮಾನತುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದು, ಅಮಾನತುಗೊಳಿಸುವವರೆಗೂ ಶವಗಳನ್ನು ತೆಗೆಯಲು ಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಈ ಸಂದರ್ಭ ಹೆರಿಗೆ ಮಾಡಿಸಲು ಆಧಾರ್​, ತಾಯಿ ಕಾರ್ಡ್ ಕಡ್ಡಾಯವಲ್ಲ.

ಈ ಸಂಬಂಧ ಮಾಹಿತಿ ಪಡೆದು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು. ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಡಾಕ್ಟರ್​ ಹಾಗೂ ಇಬ್ಬರು ದಾದಿಯರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪ: ರಕ್ತ ಸ್ರಾವದಿಂದ ಬಾಣಂತಿ.. ಹುಟ್ಟಿದ ಅವಳಿ ಮಕ್ಕಳ ಸಾವು

Last Updated : Nov 3, 2022, 10:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.