ETV Bharat / state

ಹೊಟ್ಟೆ ನೋವೆಂದು ಬಂದ ರೋಗಿ ಸಾವು..ರೊಚ್ಚಿಗೆದ್ದ ಸಂಬಂಧಿಕರು ಮಾಡಿದ್ದೇನು?

ತುಮಕೂರಿನ ಖಾಸಗಿ ವಿನಾಯಕ ಆಸ್ಪತ್ರೆಗೆ ಹೊಟ್ಟೆ ನೋವೆಂದು ದಾಖಲಾದ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಕರು, ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.

Doctors neglect patient allegations
ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ರೋಗಿ ಸಾವು
author img

By

Published : Jan 16, 2020, 8:48 AM IST

Updated : Jan 16, 2020, 11:31 AM IST

ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದಲೇ ರೋಗಿ ಸಾವನ್ನಪ್ಪಿದ್ದಾನೆಂದು ಆರೋಪಿಸಿ ಆತನ ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ನುಗ್ಗಿ ಗಾಜುಗಳನ್ನು ಪುಡಿಗಟ್ಟಿರುವ ಘಟನೆ ತುಮಕೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಗರದ ವಿನಾಯಕ ಆಸ್ಪತ್ರೆಗೆ ನಿನ್ನೆ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೊಮ್ಮದ್ ಗೌಸ್ (50) ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲಿ ಸಣ್ಣ ಇನ್ಫೆಕ್ಷನ್ ಆಗಿದೆ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗುತ್ತಾರೆ ಎಂದು ವೈದ್ಯರು ತಿಳಿಸಿದ್ದರು.

ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ರೋಗಿ ಸಾವು

ಆದರೆ ರಾತ್ರಿ ಏಕಾಏಕಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಸೂಚಿಸಿದ್ದರಂತೆ. ಆದರೆ, ಸ್ವಲ್ಪ ಹೊತ್ತಿನಲ್ಲಿಯೇ ಮೊಹಮ್ಮದ್ ಗೌಸ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಇದರಿಂದ ರೊಚ್ಚಿಗೆದ್ದ ಮೃತರ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ದಾಂಧಲೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ತಿಲಕ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್​​​ಸ್ಪೆಕ್ಟರ್ ಪಾರ್ವತಮ್ಮ ಅವರು ದಾಂಧಲೆ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡು, ಪರಿಸ್ಥಿತಿಯನ್ನು ಹತೋಟಿಗೆ ತಂದರು.

Intro:Body:ವೈದ್ಯರ ನಿರ್ಲಕ್ಷ್ಯ ಆರೋಪ ರೋಗಿ ಸಾವು...... ಆಸ್ಪತ್ರೆ ಗಾಜುಗಳು ಪುಡಿಗಟ್ಟಿದ ಸಂಬಂಧಿಕರು...

ತುಮಕೂರು
ವೈದ್ಯರ ನಿರ್ಲಕ್ಷದಿಂದಲೇ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಆತನ ಸಂಬಂಧಿಕರು ಖಾಸಗಿ ಆಸ್ಪತ್ರೆಗೆ ನುಗ್ಗಿ ಗಾಜುಗಳನ್ನು ಪುಡಿಗಟ್ಟಿರುವ ಘಟನೆ ತುಮಕೂರಿನಲ್ಲಿ ನಿನ್ನೆ ರಾತ್ರಿನಡೆದಿದೆ.
ನಗರದ ವಿನಾಯಕ ಆಸ್ಪತ್ರೆಗೆ ನಿನ್ನೆ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮೊಮ್ಮದ್ ಗೌಸ್ (50) ಎಂಬುವವರನ್ನು ಅವರ ಸಂಬಂಧಿಕರು ವಿನಾಯಕ ಆಸ್ಪತ್ರೆಗೆ ದಾಖಲಿಸಿದ್ದರು.
ಹೊಟ್ಟೆಯಲ್ಲಿ ಸಣ್ಣ ಇನ್ಫೆಕ್ಷನ್ ಆಗಿದೆ ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗುತ್ತಾರೆ ಎಂದು ವೈದ್ಯರು ತಿಳಿಸಿದ್ದರು. ಆದರೆ ರಾತ್ರಿ ಏಕಾಏಕಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಸೂಚಿಸಿದ್ದರಂತೆ. ಆದರೆ ಸ್ವಲ್ಪ ಹೊತ್ತಿನಲ್ಲಿಯೇ ಮೊಹಮ್ಮದ್ ಗೌಸ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಇದರಿಂದ ರೊಚ್ಚಿಗೆದ್ದ ಮೃತರ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಆಸ್ಪತ್ರೆ ಎದುರು ದಾಂದಲೆ ನಡೆಸಿದರು. ಅಲ್ಲದೆ ಗಾಜುಗಳನ್ನು ಪುಡಿ ಗಟ್ಟಿದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ತಿಲಕ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪಾರ್ವತಮ್ಮ ಅವರು ದಾಂದಲೆ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡರು. ಮತ್ತು ಪರಿಸ್ಥಿತಿಯನ್ನು ಹತೋಟಿಗೆ ತಂದರುConclusion:
Last Updated : Jan 16, 2020, 11:31 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.