ತುಮಕೂರು: ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೊದಲ ವರ್ಷದ ಪುಣ್ಯ ಸ್ಮರಣಾರ್ಥ ಶ್ರೀ ಸಿದ್ದಗಂಗಾ ಮಠದಲ್ಲಿ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪ್ರಥಮ ಪುಣ್ಯ ಸ್ಮರಣೆ ಹಿನ್ನೆಲೆ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿ ಗದ್ದುಗೆ ಮೇಲೆ ಕಳಸದ ಸ್ವರೂಪದಲ್ಲಿ ಹೂವಿನಿಂದ ಅಲಂಕಾರ ಮಾಡಲಾಗಿದೆ. ಬೆಳಗ್ಗೆಯಿಂದಲೇ ನೂರಾರು ಭಕ್ತರು ಸಾಲುಗಟ್ಟಿ ನಿಂತು ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ.
ಭಕ್ತರಿಗೆ ಮಠದ ಆವರಣದಲ್ಲಿ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ಮಠದಲ್ಲಿ ಮಕ್ಕಳು ಮತ್ತು ಸ್ವಯಂ ಸೇವಕರ್ತರು ಪ್ರಸಾದ ವ್ಯವಸ್ಥೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನೂ ಶ್ರೀಗಳು ದರ್ಶನ ನೀಡುತ್ತಿದ್ದ ಸ್ಥಳದಲ್ಲಿಯೂ ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ಶ್ರೀಗಳ ಪುತ್ಥಳಿಗೆ ನಮಸ್ಕರಿಸುತ್ತಿದ್ದ ದೃಶ್ಯ ಕಂಡುಬಂತು.
ಇನ್ನೂ ಸ್ವಾಮೀಜಿ ಗದ್ದುಗೆ ಎದುರು ವಿಶೇಷವಾಗಿ ಸುಮಾರು ಆರು ಅಡಿ ಎತ್ತರದ ಗಂಧದ ಕಡ್ಡಿಯನ್ನು ಹಚ್ಚಿ ಭಕ್ತರು ಸ್ವಾಮೀಜಿಯವರಿಗೆ ತಮ್ಮ ಭಕ್ತಿ ಸಮರ್ಪಣೆ ಮಾಡುತ್ತಿದ್ದಾರೆ.