ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಸುಗಮವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಕ್ಷೇತ್ರ ಚುನಾವಣಾಧಿಕಾರಿಗಳು ಎಸ್ಪಿಗೆ ಸೂಚಿಸಿದ್ದಾರೆ.
ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇದು ಅತ್ಯಂತ ಸೂಕ್ಷ್ಮ ಕ್ಷೇತ್ರವಾಗಿದೆ ಎಂದು ಜಿಲ್ಲಾ ಎಸ್ಪಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
![Election Commissioner](https://etvbharatimages.akamaized.net/etvbharat/prod-images/kn-tmk-06-15-dcletter-7202233-shanthinath_15052019073101_1505f_00022_950.jpg)
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿಷ್ಪಕ್ಷಪಾತ ಮತ ಎಣಿಕೆ ನಡೆಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಮೇ 13ರಂದು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಈ ಪತ್ರವನ್ನು ಕೂಡ ಜಿಲ್ಲಾಧಿಕಾರಿಗಳು ಉಲ್ಲೇಖಿಸಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಂಡಿರುವ ಬಗ್ಗೆ ಬಸವರಾಜ್ ಅವರ ಗಮನಕ್ಕೆ ತಂದಿದ್ದಾರೆ.