ETV Bharat / state

ತುಮಕೂರು ವಿವಿಯಲ್ಲಿ ಪರಿಸರ ಕಾಳಜಿ ಕುರಿತು ಒಂದು ದಿನದ ಕಾರ್ಯಗಾರ - environmental concerns in Tumkur VV

ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವಿಭಾಗದ ವತಿಯಿಂದ ಪರಿಸರ ಕಲುಷಿತಗೊಳ್ಳುವುದನ್ನು ನಿಯಂತ್ರಿಸುವ ತಂತ್ರಗಳು ಎಂಬ ವಿಚಾರದ ಬಗ್ಗೆ ಒಂದು ದಿನದ ರಾಷ್ಟ್ರೀಯ ಕಾರ್ಯಗಾರವನ್ನು ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಗಾರ
ಕಾರ್ಯಗಾರ
author img

By

Published : Mar 3, 2020, 6:12 PM IST

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದಲ್ಲಿ, ಪರಿಸರ ಕಲುಷಿತಗೊಳ್ಳುವುದನ್ನು ನಿಯಂತ್ರಿಸುವ ತಂತ್ರಗಳು ಎಂಬ ವಿಚಾರದ ಕುರಿತಾಗಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ರಾಷ್ಟ್ರೀಯ ಕಾರ್ಯಗಾರವನ್ನು ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್ ರಂಗಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸರ್ಕಾರ ಈ ಕೂಡಲೇ ತುಮಕೂರು ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ನೂತನ ಕ್ಯಾಂಪಸ್ ನಿರ್ಮಿಸಿ, ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ಪಡೆಯಲು ಅನುವುಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ. ಕೆ.ಎಸ್ ರಂಗಪ್ಪ

ಪರಿಸರದ ಬಗ್ಗೆ ಪ್ರತಿಯೊಬ್ಬ ವ್ಯಕ್ತಿಯು ಕಾಳಜಿವಹಿಸಬೇಕು, ಮನುಷ್ಯನ ಜೀವನದ ಒಂದು ಭಾಗವಾಗಿರುವ ಪರಿಸರವನ್ನು ತನ್ನ ಸ್ವಾರ್ಥಕ್ಕಾಗಿ ಹಾಳು ಮಾಡುತ್ತಿದ್ದಾನೆ. ತನ್ನ ಅವಶ್ಯಕತೆಗೆ ಬೇಕಾದಷ್ಟು ಮಾತ್ರ ಪರಿಸರವನ್ನು ಉಪಯೋಗಿಸಿಕೊಂಡು, ಕಾಪಾಡಿಕೊಂಡು ಹೋಗುವಂತಹ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕಿದೆ. ಪರಿಸರ ಅಧ್ಯಯನ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಧ್ಯಯನಗಳು ನಡೆದರೂ ಪರಿಸರವನ್ನು ರಕ್ಷಿಸುವಲ್ಲಿ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.