ETV Bharat / state

35ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಕ್ತಪರೀಕ್ಷೆ ಜೊತೆ ಉಚಿತ ಚಿಕಿತ್ಸೆ: ಡಾ. ಚಂದ್ರಿಕಾ - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ

35 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಕ್ತಪರೀಕ್ಷೆ ಮಾಡಿಸಿ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಆರೋಗ್ಯ ಇಲಾಖೆಯಿಂದ ಅರಿವು ಜಾಥಾ
author img

By

Published : Nov 14, 2019, 4:22 PM IST

ತುಮಕೂರು: ಜಿಲ್ಲಾ ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಕ್ತ ಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್​​ನಿಂದ ಆಗುವ ತೊಂದರೆಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಆರೋಗ್ಯ ಇಲಾಖೆಯಿಂದ ಅರಿವು ಜಾಥಾ

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಪಂಚಾಯತ್, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಅರಿವು ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಮಧುಮೇಹ ಬರಿ ಸಕ್ಕರೆ ಕಾಯಿಲೆ ಅಲ್ಲದೆ ಅದು ಕಣ್ಣು, ಮೂತ್ರಪಿಂಡ, ಹೃದಯ ಹಾಗೂ ದೇಹದಲ್ಲಿನ ನರಗಳಿಗೆ ತೊಂದರೆ ಉಂಟು ಮಾಡುತ್ತದೆ. ಮಧುಮೇಹದಿಂದ ಉಂಟಾಗುವ ಕುರುಡುತನವನ್ನು, ಸಕ್ಕರೆ ಕಾಯಿಲೆ ನಿಯಂತ್ರಣ ಹಾಗೂ ನಿಯತಕಾಲಿಕ ಕಣ್ಣಿನ ಪರೀಕ್ಷೆಯಿಂದ ತಡೆಗಟ್ಟುವುದು ಎಂಬ ವಿಷಯಗಳ ಬಗ್ಗೆ ಅರಿವಿನ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಮಾತನಾಡಿ, ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಎಲ್ಲರಿಗೂ ರಕ್ತಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್ ನಿಂದ ಕಣ್ಣಿನ ಕಾಯಿಲೆ, ಕಿಡ್ನಿ ತೊಂದರೆ, ಹೃದಯಕ್ಕೆ ತೊಂದರೆ ಯಾವುದೇ ಇದ್ದರೂ ಅದನ್ನು ಅರಿತು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಮಹೇಶ್ ಮಾತನಾಡಿ, ಮಧುಮೇಹ ಹಾಗೂ ಮಧುಮೇಹದಿಂದ ಆಗುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧುಮೇಹದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.

Intro:ತುಮಕೂರು: ಜಿಲ್ಲಾ ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ರಕ್ತಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್ ನಿಂದ ಆಗುವ ತೊಂದರೆಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ತಿಳಿಸಿದರು.

Body:ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಜಿಲ್ಲಾ ಪಂಚಾಯತ್, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ವತಿಯಿಂದ ವಿಶ್ವಮಧುಮೇಹ ದಿನಾಚರಣೆಯ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಅರಿವು ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಮಧುಮೇಹ ಬರಿ ಸಕ್ಕರೆ ಕಾಯಿಲೆ ಅಲ್ಲದೆ ಅದು ಕಣ್ಣು, ಮೂತ್ರಪಿಂಡ, ಹೃದಯ ಹಾಗೂ ದೇಹದಲ್ಲಿನ ನರಗಳಿಗೆ ತೊಂದರೆ ಉಂಟು ಮಾಡುತ್ತದೆ. ಮಧುಮೇಹದಿಂದ ಉಂಟಾಗುವ ಕುರುಡುತನವನ್ನು, ಸಕ್ಕರೆ ಕಾಯಿಲೆ ನಿಯಂತ್ರಣ ಹಾಗೂ ನಿಯತಕಾಲಿಕ ಕಣ್ಣಿನ ಪರೀಕ್ಷೆಯಿಂದ ತಡೆಗಟ್ಟುವುದು ಎಂಬ ವಿಷಯಗಳ ಬಗ್ಗೆ ಅರಿವು ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ ಮಾತನಾಡಿ, ಸಾರ್ವಜನಿಕರಲ್ಲಿ ಮಧುಮೇಹದ ಬಗ್ಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಆರೋಗ್ಯ ಇಲಾಖೆಯಿಂದ 35 ವರ್ಷ ಮೇಲ್ಪಟ್ಟ ಎಲ್ಲರಿಗೂ ರಕ್ತಪರೀಕ್ಷೆ ಮಾಡುವ ಮೂಲಕ ಅವರಲ್ಲಿ ಸಕ್ಕರೆ ಕಾಯಿಲೆ ಕಂಡುಬಂದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಜೊತೆಗೆ ಡಯಾಬಿಟಿಸ್ ನಿಂದ ಕಣ್ಣಿನ ಕಾಯಿಲೆ, ಕಿಡ್ನಿ ತೊಂದರೆ, ಹೃದಯಕ್ಕೆ ತೊಂದರೆ ಯಾವುದೇ ಇದ್ದರೂ ಅದನ್ನು ಅರಿತು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.
ಬೈಟ್: ಡಾ. ಚಂದ್ರಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ. ಮಹೇಶ್ ಮಾತನಾಡಿ, ಮಧುಮೇಹ ಹಾಗೂ ಮಧುಮೇಹದಿಂದ ಆಗುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯಲಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧುಮೇಹದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.
ಬೈಟ್: ಡಾ. ಮಹೇಶ್, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ.

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.