ತುಮಕೂರು: ಚಿತ್ರದುರ್ಗದ ಮುರುಘಾ ಮಠದಲ್ಲಿ ಯಾರು ಇರುತ್ತಾರೆ. ಯಾರು ಇರಲ್ಲ ಅನ್ನೋದು ಮುಖ್ಯವಲ್ಲ. ನಾನು ಚಿತ್ರದುರ್ಗಕ್ಕೆ ಹೋದರೆ ಮುರುಘಾ ಮಠಕ್ಕೆ ಭೇಟಿ ನೀಡುತ್ತೇನೆ. ಗದ್ದುಗೆಯಲ್ಲಿ ದರ್ಶನ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಯದೇವ ಸ್ವಾಮಿಗಳು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಮಿತ್ ಶಾ, ರಾಹುಲ್ ಗಾಂಧಿ, ಬಿ.ಎಸ್.ಯಡಿಯೂರಪ್ಪ ಒಳಗೊಂಡಂತೆ ನಾನು ಕೂಡ ಮಠಕ್ಕೆ ಭೇಟಿ ನೀಡಿದ್ದೇನೆ. ಮಠಕ್ಕೆ ಎಲ್ಲ ಪಕ್ಷದವರು ಹೋಗಿದ್ದಾರೆ. ಮುಂದೆ ಕೂಡ ಹೋಗುತ್ತಾರೆ ಎಂದರು.
ಈಗ ಸ್ವಾಮೀಜಿಯವರ ಪ್ರಕರಣ ಕೋರ್ಟ್ನಲ್ಲಿದೆ. ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರಗೆ ಬರಲಿದೆ. ಸಿಗಬೇಕಾದವರಿಗೆ ನ್ಯಾಯ ಸಿಗಲಿ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.
ಇದನ್ನೂ ಓದಿ: ಮುರುಘಾ ಶ್ರೀಗಳ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ