ETV Bharat / state

ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿ: ಸರ್ಕಾರಕ್ಕೆ ರೈತರ ಆಗ್ರಹ - corona scare

ಕೊರೊನಾ ಬಿಕ್ಕಟ್ಟು ಹಾಗೂ ಲಾಕ್​ಡೌನ್​ ವ್ಯವಸ್ಥೆ ನಡುವೆ ರೈತರು ತಮ್ಮ ಬೆಳೆಗಳಿಗೆ ನಿರೀಕ್ಷಿತ ಬೆಲೆ ಸಿಗುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಿದ್ದರೂ ಕೃಷಿ ಚಟುವಟಿಕೆಯಲ್ಲಿ ಮಾತ್ರ ರೈತರು ಹಿಂದೇಟು ಹಾಕಿಲ್ಲ

farming
farming
author img

By

Published : Jul 21, 2020, 10:22 AM IST

ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮುಂಗಾರು ಆರಂಭವಾಗಿದೆ. ರೈತಾಪಿ ವರ್ಗದವರು ಕೃಷಿ ಕಾಯಕದಲ್ಲಿ ನಿರತರಾಗಿದ್ದಾರೆ. ಜಿಲ್ಲೆಯ ಗುಬ್ಬಿ ತುರುವೇಕೆರೆ ತಿಪಟೂರು ಕುಣಿಗಲ್ ತುಮಕೂರು ತಾಲೂಕಿನ ಬಹುಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ.

ಕೊರೊನಾ ಬಿಕ್ಕಟ್ಟು ಹಾಗೂ ಲಾಕ್​ಡೌನ್​ ವ್ಯವಸ್ಥೆ ನಡುವೆ ರೈತರು ತಮ್ಮ ಬೆಳೆಗಳಿಗೆ ನಿರೀಕ್ಷಿತ ಬೆಲೆ ಸಿಗುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ರೈತರ ಆಗ್ರಹ
ಹೀಗಿದ್ದರೂ ಕೃಷಿ ಚಟುವಟಿಕೆಯಲ್ಲಿ ಮಾತ್ರ ರೈತರು ಹಿಂದೇಟು ಹಾಕಿಲ್ಲ. ಮುಂದಿನ ದಿನಗಳಲ್ಲಿ ತಮ್ಮ ಕೃಷಿಯುತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿದರೆ ಇಂತಹ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು ಎನ್ನುತ್ತಿದ್ದಾರೆ.

ಈಗಾಗಲೇ ಲಾಕ್​ಡೌನ್ ಸಂದರ್ಭದಲ್ಲಿ ಬಹುತೇಕ ತರಕಾರಿ ಬೆಳೆಗಳು ರೈತರಿಗೆ ನಿರೀಕ್ಷಿತ ಮಟ್ಟದಲ್ಲಿ ಲಾಭ ತಂದು ಕೊಟ್ಟಿಲ್ಲ. ಈ ಕುರಿತು ಸರ್ಕಾರ ಚಿಂತನೆ ನಡೆಸಿ ಮುಂದಿನ ದಿನಗಳಲ್ಲಿ ರೈತರ ನೆರವಿಗೆ ಬರಬೇಕೆಂದು ಕೃಷಿಕರು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.