ETV Bharat / state

ತುಮಕೂರು; ಪ್ರತಿ ಕುಟುಂಬಕ್ಕೆ ಮಾಸಿಕ 7,500 ರೂ. ಸಹಾಯ ಧನ ನೀಡಲು ಆಗ್ರಹ - Tumkur latest news

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Protest
Protest
author img

By

Published : Sep 5, 2020, 3:55 PM IST

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೋವಿಡ್-19 ರೋಗಕ್ಕೆ ತುತ್ತಾದವರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲ ಕುಟುಂಬಗಳಿಗೆ ಕೊರೊನಾ ಸಮಸ್ಯೆ ಇತ್ಯರ್ಥವಾಗುವವರೆಗೂ ಮಾಸಿಕ 7,500 ರೂ.ಗಳ ನೆರವು ಘೋಷಿಸಬೇಕು. ಅಲ್ಲದೇ ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್ ಒದಗಿಸಬೇಕು ಎಂದು ಒತ್ತಾಯಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ 600 ರೂಗಳಿಗೆ ಹೆಚ್ಚಳ ಮಾಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.‌ ವ್ಯವಸಾಯವನ್ನು ಕಾರ್ಪೊರೇಟ್ ಕಂಪನಿಗಳಿಗೆ ವಹಿಸುವ ಎಲ್ಲಾ ಭೂ ಹಾಗೂ ವ್ಯವಸಾಯಕ್ಕೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.