ತುಮಕೂರು: ನಗರದಲ್ಲಿ ಅಮಿತ್ ಶಾ ರೋಡ್ ಶೋ ಸಿದ್ಧತೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗದ್ದಲ ನಡೆದಿದೆ.
ಟೌನ್ ಹಾಲ್ ಸರ್ಕಲ್ನಲ್ಲಿ ಬಿಜೆಪಿ ರ್ಯಾಲಿ ಪಕ್ಕದಲ್ಲಿಯೇ ಮೈತ್ರಿ ಕಚೇರಿ ಇದೆ. ಇಲ್ಲಿ ಜೆಡಿಎಸ್ ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಇದರಿಂದಾಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಎರಡು ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು.