ETV Bharat / state

ಅತ್ಯಾಚಾರ, ಕೊಲೆ ಆರೋಪ : ತುಮಕೂರು ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು

ತುಮಕೂರು ಮಹಾನಗರ ಪಾಲಿಕೆ ಮಾಜಿ ನಾಮ ನಿರ್ದೇಶಿತ ಕಾರ್ಪೊರೇಟರ್‌ ರಾಜೇಂದ್ರ ಕುಮಾರ್‌ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಆರೋಪ ಕೇಳಿಬಂದಿದ್ದು, ಈ ಕುರಿತು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ರಾಜೇಂದ್ರ ಕುಮಾರ್‌
ರಾಜೇಂದ್ರ ಕುಮಾರ್‌
author img

By

Published : Mar 13, 2022, 10:19 AM IST

ತುಮಕೂರು : ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಮಾಜಿ ನಾಮ ನಿರ್ದೇಶಿತ ಸದಸ್ಯ ರಾಜೇಂದ್ರ ಕುಮಾರ್ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಮಗಳ ಸಾವಿಗೆ ರಾಜೇಂದ್ರಕುಮಾರ್ ಕಾರಣ ಎಂದು ಆರೋಪಿಸಿ ಯುವತಿಯ ತಾಯಿ ದೂರು ನೀಡಿದ್ದಾರೆ. ರಾಜೇಂದ್ರ ಕುಮಾರ್ ಸೇರಿದಂತೆ ಆತನ ನಾದಿನಿ ಭಾಗ್ಯ, ರಂಜನ್ ಕುಮಾರಿ, ಮನೋಜ್ ಪ್ರಭಾಕರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಗರದ ಚರ್ಚ್ ಸಮಿತಿ ಸದಸ್ಯನಾದ 55 ವರ್ಷದ ರಾಜೇಂದ್ರ ಕುಮಾರ್‌ ತುಮಕೂರಿನ 18 ವರ್ಷದ ಯುವತಿಯ ಜತೆ ಅಕ್ರಮ ಸಂಬಂಧ ಬೆಳೆಸಿಕೊಂಡು ಆಕೆಯನ್ನು ಗರ್ಭಿಣಿ ಮಾಡಿದ್ದು, ವೈದ್ಯರ ಸಲಹೆ ಪಡೆಯದೇ ಬಲವಂತವಾಗಿ ಯುವತಿಗೆ ಗರ್ಭಪಾತದ ಮಾತ್ರೆ ನೀಡಿದ ಪರಿಣಾಮ ಅಸ್ವಸ್ಥಳಾಗಿದ್ದ ಯುವತಿ, 4 ತಿಂಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

2021ರ ಅ.31ರಂದು ಗರ್ಭಪಾತಕ್ಕೆ ನೀಡಿದ್ದ ಮಾತ್ರೆಯಿಂದ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ನ.1ರಂದು ಯುವತಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನ.8ರಂದು ಸಾವನ್ನಪ್ಪಿದ್ದ ಯುವತಿ ಮೃತ ದೇಹದ ಅಂತ್ಯಕ್ರಿಯೆ ಬೆಂಗಳೂರಿನ ಶಾಂತಿ ನಗರದ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ನಡೆದಿತ್ತು.

ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಯುವತಿ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗಿದ್ದು, ಆಡಿಯೋ ಹಿನ್ನೆಲೆಯಲ್ಲಿ ನಾವು ತನಿಖೆ ಆರಂಭಿಸಿದ್ದೇವೆ. ಇದೇ ಸಮಯಕ್ಕೆ ಮೃತ ಯುವತಿ ತಾಯಿ ಕೂಡ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಕೆಮಿಕಲ್​​ ಅಂಗಡಿಗಳಿಗೆ ಬೆಂಕಿ ಹಚ್ಚಿ ಮೆಡಿಕಲ್ ವಿದ್ಯಾರ್ಥಿಗಳಿಂದ ಕಲ್ಲು ತೂರಾಟ : 10 ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.