ತುಮಕೂರು : ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಪಟಾಕಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ನಗರದ ಕೋತಿ ತೋಪು ಬಡಾವಣೆಯಲ್ಲಿ ನಡೆದಿದೆ.
ತಿಮ್ಮರಾಜು ಎಂಬುವರ ಮನೆಯಲ್ಲಿ ಇಂದು ಮಧ್ಯಾಹ್ನ ಸುಮಾರು 3.30ರ ಸಂದರ್ಭದಲ್ಲಿ ಆಕಸ್ಮಿಕ ಬೆಂಕಿ ತಗುಲಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಅಕ್ರಮವಾಗಿ ಪಟಾಕಿಯನ್ನು ಸಂಗ್ರಹಿಸುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಸಂಬಂಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.