ETV Bharat / state

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ನಷ್ಟ - ಆಕಸ್ಮಿಕ ಬೆಂಕಿ

ಸೂಗೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಪೀಠೋಪಕರಣ, ಕಂಪ್ಯೂಟರ್​​ಗಳು ಸುಟ್ಟು ಭಸ್ಮವಾಗಿದೆ.

Fire in Tumakur hospital
ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ...ಅಪಾರ ನಷ್ಟ!
author img

By

Published : May 3, 2020, 4:39 PM IST

ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿರುವ ಘಟನೆ ತಿಪಟೂರು ತಾಲೂಕು ಸೂಗೂರು ಗ್ರಾಮದಲ್ಲಿ ನಡೆದಿದೆ.

ತುಮಕೂರು: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ನಷ್ಟ

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ ಪೀಠೋಪಕರಣ, ಕಂಪ್ಯೂಟರ್​​ಗಳು ಸುಟ್ಟು ಹೋಗಿವೆ. ಅಲ್ಲದೇ, ಅಪಾರ ಪ್ರಮಾಣದ ಔಷಧಿಗಳು ಕೂಡಾ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಿದ್ದಾರೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.