ತುಮಕೂರು: ಸಣ್ಣ ಕೈಗಾರಿಕೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಸುಟ್ಟಿರುವ ಘಟನೆ ಅಗಳಕೋಟೆ ಬಳಿ ನಡೆದಿದೆ.
ಶಾಟ್೯ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಂದಾಜಿಸಲಾಗಿದ್ದು, ಬೈಕ್, ಯಂತ್ರೋಪಕರಣಗಳು, ಪ್ಲಾಸ್ಟಿಕ್ ಕಚ್ಚಾ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದೆ. ಇನ್ನು ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಅಗ್ನಿ ನಂದಿಸಿದೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.