ತುಮಕೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ದಂಧೆಯ ಕುರಿತು ಖಚಿತ ಮಾಹಿತಿ ಆಧರಿಸಿ ಚಿಕ್ಕನಾಯಕನಹಳ್ಳಿ ಪಟ್ಟಣದ ಮನೆಯೊಂದರ ಮೇಲೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ಮೂವರು ಮಹಿಳೆಯರು ಸೇರಿ ಐವರನ್ನು ಅರೆಸ್ಟ್ ಮಾಡಿದ್ದಾರೆ.
ಇಲ್ಲಿ ಅನೇಕ ದಿನಗಳಿಂದ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ದೂರುಗಳು ಬಂದಿದ್ದವು. ಹೊರ ಜಿಲ್ಲೆಯಿಂದ ಮಹಿಳೆಯರನ್ನು ಕರೆತಂದು ವ್ಯವಸ್ಥಿತವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎನ್ನಲಾಗಿತ್ತು. ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಟ್ಯಾಟೂ ಮೂಲಕ ಪೋಷಕರ ಮಡಿಲು ಸೇರಿದ ಮಾನಸಿಕ ಅಸ್ವಸ್ಥ ಬಾಲಕ