ತುಮಕೂರು : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿರಾ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮುರಳಿ ಮಾರನಗೆರೆ ಗೊಲ್ಲರಹಟ್ಟಿಯ ನಿವಾಸಿ. ಕೊಲೆ ಮಾಡಿದ ಆಟೋ ಚಾಲಕ ವಿನಾಯಕ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.