ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆ ಸಿಕ್ಕ ಘಟನೆ ಜಿಲ್ಲೆಯ ಹೊನ್ನುಡಿಕೆ ಗ್ರಾಮದಲ್ಲಿ ನಡೆದಿದೆ.
ಬೈಚೆನಹಳ್ಳಿ ಗ್ರಾಮದಲ್ಲಿ ಒಂದೂವರೆ ವರ್ಷದ ಮಗುವನ್ನು ಚಿರತೆ ಹೊತ್ತೊಯ್ದಿತ್ತು. ಹಲವು ದಿನಗಳಿಂದ ಚಿರತೆ ಉಪಟಳದಿಂದ ಸುತ್ತಮುತ್ತಲ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಬೋನಿನಲ್ಲಿ ಸೆರೆಯಾಗಿರುವ ಚಿರತೆಯನ್ನು ಸ್ಥಳಾಂತರಿಸಲು ಸಿದ್ಧತೆ ನಡೆಸಿದ್ದಾರೆ.