ETV Bharat / state

ಶ್ರೀಗಂಧ ಕಳ್ಳರಿಗೆ ಮನಸೋಇಚ್ಛೆ ಒದ್ದು ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿ - ಕಾಲಿನಿಂದ ತುಳಿದು ವಿಕೃತಿ ಮೆರೆದ ಅರಣ್ಯ ಇಲಾಖೆ ಸಿಬ್ಬಂದಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿ ಹರಗಲದೇವಿ ಗುಡ್ಡದಲ್ಲಿ ಶ್ರೀಗಂಧದ ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಂತರ ಅಧಿಕಾರಿಗಳು ಮನಸೋ ಇಚ್ಛೆ ಕಾಲಿನಿಂದ ಒದ್ದಿರುವ ವಿಡಿಯೋ ದೊರೆತಿದೆ.

Forest officer beaten sandalwood tree thieves  in Tumkur
ಶ್ರೀಗಂಧ ಕಳ್ಳರನ್ನು ಬಂಧಿಸಿ ಕಾಲಿನಿಂದ ತುಳಿದು ವಿಕೃತಿ ಮೆರೆದ ಅರಣ್ಯ ಇಲಾಖೆ ಸಿಬ್ಬಂದಿ
author img

By

Published : Sep 9, 2021, 8:25 PM IST

ತುಮಕೂರು: ಶ್ರೀಗಂಧ ಮರ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದಿರುವ ಕಳ್ಳರನ್ನು ಬಂಧಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮನಬಂದಂತೆ ಬೂಟುಕಾಲಿನಿಂದ ಒದ್ದಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿ ಹರಗಲದೇವಿ ಗುಡ್ಡದಲ್ಲಿ ನಡೆದಿದೆ.

ವೈರಲ್ ವಿಡಿಯೋ

ಕಡಬ ಹೋಬಳಿ ಹರಗಲದೇವಿ ಗುಡ್ಡದ ಸರ್ವೇ ನಂ.1 ರ 1500 ಎಕರೆ ವಿಸ್ತೀರ್ಣದ ಮೀಸಲು ಅರಣ್ಯ ಪ್ರದೇಶದಲ್ಲಿ ತಮಿಳುನಾಡು ಮೂಲದ 12 ಜನ ಮರಗಳ್ಳರ ತಂಡ ಬಂದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.

ಈ ವೇಳೆ ಶ್ರೀಗಂಧ ಮರಗಳನ್ನು ಖದಿಯುತ್ತಿದ್ದ ಕಳ್ಳರ ಮೇಲೆ ಗುಂಡು ಹಾರಿಸಿ ಬಂಧಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸ್ಥಳದಲ್ಲಿ ವಶಕ್ಕೆ ಪಡೆದಿದ್ದರು. ಬಳಿಕ ಅವರ ಕೈ, ಕಾಲುಗಳನ್ನು ಕಟ್ಟಿ ಮನಬಂದಂತೆ ಹಲ್ಲೆ ಮಾಡಿ ಕಾಲಿನಿಂದ ತುಳಿದಿದ್ದಾರೆ. ಈ ಕುರಿತಾದ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: ಬೊಮ್ಮಾಯಿ ಹಿಂದೆ ಸೂತ್ರಧಾರಿ ಇದ್ದಾರೆ, ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ: ಕೋಡಿಶ್ರೀ ಭವಿಷ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.