ತುಮಕೂರು : ಶ್ರೀಗಂಧ ಮರ ಕಡಿಯುತ್ತಿದ್ದ ಇಬ್ಬರು ಮರಗಳ್ಳರನ್ನು ಹಿಡಿಯಲು ಹೋದ ವೇಳೆ ಅರಣ್ಯಾಧಿಕಾರಿಗಳ ಮೇಲೆ ಏಕಾಏಕಿ ದಾಳಿ ನಡೆದಿದೆ. ಈ ವೇಳೆ ಅಧಿಕಾರಿಗಳು ಪ್ರತಿದಾಳಿ ನಡೆಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೆಂಕೆರೆ ಅರಣ್ಯದಲ್ಲಿ ಇಬ್ಬರು ಶ್ರೀಗಂಧದ ಮರಗಳನ್ನು ಕಟಾವು ಮಾಡುತ್ತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಅಧಿಕಾರಿಗಳು ಅವರನ್ನು ಬಂಧಿಸಲು ಮುಂದಾಗಿದ್ದರು.
ಈ ವೇಳೆ ಮರಗಳ್ಳರು ಅಧಿಕಾರಿಗಳ ಮೇಲೆ ಮಚ್ಚು, ಕೊಡಲಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ. ಇದರಿಂದ ಪ್ರಾಣ ರಕ್ಷಣೆಗಾಗಿ ತಮ್ಮ ಕೈಯಲ್ಲಿದ್ದ ಬಂದೂಕಿನಿಂದ ಅರಣ್ಯಾಧಿಕಾರಿಗಳು ಗುಂಡು ಹಾರಿಸಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಯೂರು ದುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.