ತುಮಕೂರು: ಮಿಸ್ಟರ್ ಈಶ್ವರಪ್ಪ ನಿಮಗೆ ಕುರುಬರ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ, ಸಾಮಾಜಿಕ ನ್ಯಾಯದ ಬಗ್ಗೆ ಕಾಳಜಿ ಇದ್ದರೆ ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಕುರುಬ ಸಮುದಾಯದ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೀವು ಬೂಟಾಟಿಕೆಯೆಲ್ಲ ಬಿಡಬೇಕು. ನಿಮ್ಮ ನಾಟಕ ಇಡೀ ರಾಜ್ಯದ ಕುರುಬರು ಅರ್ಥ ಮಾಡಿಕೊಂಡಿದ್ದಾರೆ ಎಂಬುದನ್ನು ತಿಳಿದುಕೊಳ್ಳಿ ಎಂದು ಟೀಕಿಸಿದರು.
ಕೇಂದ್ರದಲ್ಲಿ ನಿಮ್ಮದೇ ಸರಕಾರವಿದೆ. ರಾಜ್ಯದಲ್ಲಿಯೂ ನಿಮ್ಮದೇ ಸರಕಾರವಿದೆ. ಹೀಗಿದ್ದರೂ ಕುರುಬರಿಗೆ ಮೀಸಲಾತಿ ಕಲ್ಪಿಸಲಾಗಿಲ್ಲ. ಈ ಬಗ್ಗೆ ನೀವು ಮೌನ ವಹಿಸಿರುವುದು ಯಾಕೆ ಎಂದು ಈಶ್ವರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಓದಿ :ಎಂಎಲ್ಸಿ ಆಯ್ಕೆ ವಿಚಾರದಲ್ಲಿ ಸ್ಥಾನ ವಂಚಿತರ ಅಸಮಾಧಾನ ಮುಂದುವರಿಕೆ ; ಡಿಕೆಶಿಗೆ ಲಕ್ಷ್ಮಿನಾರಾಯಣ ಪತ್ರ