ತುಮಕೂರು: ಇಷ್ಟು ದಿನ ನನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇದೆಯೋ.. ಇಲ್ಲವೊ.. ಎಂಬುದನ್ನು ಪರೀಕ್ಷಿಸಿಕೊಳ್ಳುವ ಉದ್ದೇಶದಿಂದ ನಾನು ವ್ಯಾಕ್ಸಿನ್ ತೆಗೆದುಕೊಂಡಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜಿನಲ್ಲಿ ವ್ಯಾಕ್ಸಿನ್ ಪಡೆದ ನಂತರ ಮಾತನಾಡಿದ ಅವರು, ಕೊರೊನಾ ಪಿಡುಗು ಆರಂಭವಾದಾಗಿನಿಂದಲೂ ನಾನು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೆ. ಆದರೆ ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವ್ಯಾಕ್ಸಿನ್ ತೆಗೆದುಕೊಳ್ಳುವುದು ಸೂಕ್ತ ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ವ್ಯಾಕ್ಸಿನ್ ತೆಗೆದುಕೊಂಡ ನಂತರ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಲಿದೆ. ಹೀಗಾಗಿ 45 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ತಿಳಿಸಿದರು.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.