ತುಮಕೂರು : SSLC ಪರೀಕ್ಷೆ ವಂಚಿತ ವಿದ್ಯಾರ್ಥಿನಿ ಗ್ರೀಷ್ಮ ಮನೆಗೆ ಇಂದು ಡಾ.ಜಿ ಪರಮೇಶ್ವರ್ ಭೇಟಿ ನೀಡಿ ಧೈರ್ಯ ತುಂಬಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಿತ್ತು. ಆದ್ರೆ, ಪರೀಕ್ಷೆ ಬರೆಯಲು ಅರ್ಜಿಯನ್ನೇ ಸಲ್ಲಿಸದ ಕಾರಣ ಈ ಬಾರಿ ಅವಕಾಶ ದೊರೆಯದೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ಇಂದು ಕೊರಟಗೆರೆಯಲ್ಲಿರುವ ಮನೆಗೆ ತೆರಳಿ ವಿದ್ಯಾರ್ಥಿನಿಗೆ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಧೈರ್ಯ ತುಂಬಿದರು. ನನ್ನ ವಿಧಾನಸಭಾ ಕ್ಷೇತ್ರದಲ್ಲಿಯೇ ಇರುವ ವಿದ್ಯಾರ್ಥಿನಿ ಎಂಬ ವಿಷಯ ತಿಳಿದು ಭೇಟಿಯಾಗಿದ್ದೇನೆ. ಸಮಸ್ಯೆ ಬಗೆಹರಿಯಲಿದೆ.
ಮುಂದಿನ ದಿನಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿಗೆ ಅವಕಾಶ ನೀಡುವಂತೆ ತಿಳಿಸಿದ್ದೇನೆ. ಅಲ್ಲದೆ ರಾಜ್ಯದಲ್ಲಿ 18 ಸಾವಿರ ವಿದ್ಯಾರ್ಥಿಗಳು ಇದೇ ರೀತಿ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಅವರುಗಳಿಗೆ ನ್ಯಾಯ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ತಾಕತ್ತಿದ್ದರೆ ನನ್ನ Voice Record ಬಿಡುಗಡೆ ಮಾಡ್ಲಿ; ಇಂದ್ರಜಿತ್ ಲಂಕೇಶ್ಗೆ ದರ್ಶನ್ ಸವಾಲು!