ತುಮಕೂರು: ಶಿವಮೊಗ್ಗದಲ್ಲಿ ಫೆ. 20 ರಂದು ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ತಮ್ಮ ಒಂದು ತಿಂಗಳ ಗೌರವಧನವನ್ನು ನೀಡುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ 29 ಮಂದಿ ಹಿಂದೂಪರ ಕಾರ್ಯಕರ್ತರ ಹತ್ಯೆಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೋರಾಟಗಾರರ ಕುಟುಂಬಗಳಿಗೆ ನೈತಿಕ ಬೆಂಬಲ ನೀಡುವ ಅವಶ್ಯಕತೆ ಇದೆ ಎಂದರು.
ಬಿಜೆಪಿ ಮುಖಂಡರು ಹರ್ಷ ಅವರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಬೆಳೆದು ನಿಂತ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಹಾಯವಾಗಿ ನಿಲ್ಲುವ ಅಗತ್ಯ ಇದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಉಕ್ರೇನ್‌ನಿಂದ ದೆಹಲಿಗೆ ಬಂದಿಳಿದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು