ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದನ್ನು ಪ್ರಸ್ತಾಪಿಸುವುದು ಅಪ್ರಸ್ತುತವಾಗಿದೆ. 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಬರುವಂತಹವರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 125 ಶಾಸಕರನ್ನು ಗೆಲ್ಲಿಸಿಕೊಟ್ಟರೆ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಬಣಗಳಿಲ್ಲ. ಕಾಂಗ್ರೆಸ್ ಪಕ್ಷ ಎಂದರೆ ಒಂದೇ. ಪಕ್ಷದಲ್ಲಿ ನಾಲ್ಕೈದು ಬಣಗಳು ಇದೆಯೆಂಬುದನ್ನು ವಾಟ್ಸ್ಆ್ಯಪ್ ಹಾಗು ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವುದು. ಜನರಿಗೆ ನಾನು ಸ್ಪಷ್ಟಪಡಿಸುತ್ತಿದ್ದೇನೆ.
ಇದನ್ನೂ ಓದಿ: ‘ಯಡಿಯೂರಪ್ಪರದ್ದು ಭ್ರಷ್ಟ ಆಡಳಿತ’: ‘ಜನಪೀಡಕ ಸರ್ಕಾರ’ ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಸಿದ್ದು ವಾಗ್ದಾಳಿ