ತುಮಕೂರು : ತುಮಕೂರು ಬಿಜೆಪಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಕೆ. ಸುರೇಶ್‌ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕಾಗಿ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಪೈಪೋಟಿ ನಡೆದಿತ್ತು. ಕೊನೆಗೂ 2ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಸುರೇಶ್‌ಗೌಡ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿ ಸುರೇಶ್‌ಗೌಡ ಪ್ರತಿನಿಧಿಸಿದ್ದರು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಡಿ ಸಿ ಗೌರಿಶಂಕರ್ ವಿರುದ್ಧ ಸುರೇಶ್‌ಗೌಡ ಪರಾಭವಗೊಂಡಿದ್ದರು.