ETV Bharat / state

ಚುನಾವಣಾಧಿಕಾರಿಯಿಂದ ಮತ ಚಲಾವಣೆ ಆರೋಪ: ಡಿಸಿಗೆ ದೂರು - Former MLA Suresh Gowda reaction

ತುಮಕೂರು ತಾಲೂಕಿನ ಗೂಳೂರು ಗ್ರಾಮ ಪಂಚಾಯತ್ ಚುನಾವಣೆ ವೇಳೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೃಷ್ಣೇಗೌಡ ಸೇರಿದಂತೆ 9 ಸದಸ್ಯರ ಮತಗಳನ್ನು ಚುನಾವಣಾಧಿಕಾರಿಯೇ ಚಲಾಯಿಸಿರುವುದಾಗಿ ಆರೋಪಿಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು.

Former MLA Suresh Gowda reaction
ಮಾಜಿ ಶಾಸಕ ಸುರೇಶ್ ಗೌಡ
author img

By

Published : Feb 14, 2021, 8:06 PM IST

ತುಮಕೂರು: ತಾಲೂಕಿನ ಗೂಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಚುನಾವಣಾಧಿಕಾರಿಯೇ 9 ಸದಸ್ಯರ ಮತ ಚಲಾವಣೆ ಮಾಡಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು.

ಮಾಜಿ ಶಾಸಕ ಸುರೇಶ್ ಗೌಡ

ಈ ಬಗ್ಗೆ ಮಾತನಾಡಿದ ಅವರು, 22 ಸದಸ್ಯ ಬಲವುಳ್ಳ ಗೂಳೂರು ಗ್ರಾಮ ಪಂಚಾಯಿತಿಯಲ್ಲಿ ಜೆಡಿಎಸ್ ಬೆಂಬಲಿತ ಕೃಷ್ಣೇಗೌಡ 12 ಮತಗಳನ್ನು ಪಡೆದು ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಎಸ್​ಸಿ ಮಹಿಳೆಗೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಶಿವಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆ ವೇಳೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕೃಷ್ಣೇಗೌಡ ಸೇರಿದಂತೆ 9 ಸದಸ್ಯರ ಮತಗಳನ್ನು ಚುನಾವಣಾಧಿಕಾರಿಯೇ ಚಲಾಯಿಸಿರುವುದಾಗಿ ಆರೋಪಿಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಜಿಸಿ ಚೆನ್ನಬಸವಣ್ಣ ನೀಡಿದ ದೂರಿನ ಹಿನ್ನೆಲೆಯಲ್ಲಿ ತಹಶೀಲ್ದಾರ್, ಉಪವಿಭಾಗಾಧಿಕಾರಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಚಿತ್ರೀಕರಣದ ಸಾಕ್ಷಾಧಾರದ ಮೇಲೆ ಚುನಾವಣೆ ನಡೆಸುವ ಬಗ್ಗೆ ನಿರ್ದೇಶನ ಕೋರಿ ಆರ್​ಡಿಪಿ ಪ್ರಧಾನ ಕಾರ್ಯದರ್ಶಿ ಫೆ. 9ರಂದು ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.