ತುಮಕೂರು: ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದು, ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭವಿಷ್ಯ ನುಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ನಾನು ಸೋಲು ಅನುಭವಿಸಿದ್ದೇನೆ. ಆದರೆ ಸೋಲಿನ ನಂತರ ಜಿಲ್ಲೆಯ ಹಾಗೂ ರಾಜ್ಯದ ನಾಯಕರು ನನ್ನ ಸೋಲಿಗೆ ಸಾಕಷ್ಟು ವ್ಯತಿರಿಕ್ತವಾಗಿ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಸಂಗತಿಯಲ್ಲ ಎಂದರು. ಮುಂಬರುವ ಚುನಾವಣೆಯಲ್ಲಿ ನಾನು ತುಮಕೂರಿನಲ್ಲಿ ಇರುತ್ತೇನೆ. ಜಿಲ್ಲೆ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಪಶ್ಚಿಮ ಘಟ್ಟ ವಿಚಾರ.. ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯದ ವಿರೋಧ: ಕೇಂದ್ರಕ್ಕೆ ಸಿಎಂ ಸ್ಪಷ್ಟನೆ