ETV Bharat / state

ತುಮಕೂರಲ್ಲಿ ಖಾಸಗಿ ಬಸ್​ ಪಲ್ಟಿ..ಸ್ಥಳದಲ್ಲೇ ಐವರ ಸಾವು,40 ಮಂದಿ ಸ್ಥಿತಿ ಗಂಭೀರ

ಖಾಸಗಿ ಬಸ್ ಉರುಳಿಬಿದ್ದ ಪರಿಣಾಮ ಐವrಉ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದಿದೆ.

author img

By

Published : Oct 30, 2019, 10:14 AM IST

Updated : Oct 30, 2019, 1:43 PM IST

ಸ್ಥಳದಲ್ಲೇ ನಾಲ್ವರ ಸಾವು

ತುಮಕೂರು: ಖಾಸಗಿ ಬಸ್​​ ಉರುಳಿಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ಬಳಿ ನಡೆದಿದೆ.

ಅಪಘಾತದಲ್ಲಿ 40 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಕೊರಟಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಇಮ್ರಾನ್, ಅಕ್ರಮ್​ ಪಾಶ, ಸಾದಕ್ ,ಶಿವಕುಮಾರ್​​ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

ಸ್ಥಳದಲ್ಲೇ ಐವರು ಸಾವು

ಪಾವಗಡದಿಂದ ತುಮಕೂರು ಕಡೆಗೆ ಹೊರಟಿದ್ದ ವಿಜಯಲಕ್ಷ್ಮಿ ಖಾಸಗಿ ಬಸ್ ನಲ್ಲಿ ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದರು. ಬಸ್​​​ ಚಲಿಸುತ್ತಿದ್ದ ವೇಳೆ ಬೈಕ್ ಮತ್ತು ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್​​ ಚಾಲಕ ಪ್ರಯತ್ನಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತ ಸ್ಥಳಕ್ಕೆ ಸಚಿವ ಮಾಧುಸ್ವಾಮಿ ಭೇಟಿ:
ಇನ್ನು ಬಸ್ ಅಪಘಾತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅಪಘಾತದ ಕುರಿತು ಸಚಿವರು ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.

ಸ್ಥಳದಲ್ಲೇ ಐವರ ಸಾವು

Intro:Body:Conclusion:
Last Updated : Oct 30, 2019, 1:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.