ತುಮಕೂರು: ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಶಾಸಕ ಜ್ಯೋತಿ ಗಣೇಶ್ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೊನಾ ಸೋಂಕಿನ ಹಿನ್ನೆಲೆ ಸಂಕಷ್ಟದಲ್ಲಿನ ಜನರಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನ್ಯಾಯಬೆಲೆ ಅಂಗಡಿ ಮಾಲೀಕರು ವಂಚಿಸುವ ಪ್ರಕರಣಗಳು ಕೇಳಿಬರುತ್ತಿವೆ. ಅದಕ್ಕಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ನಗರದ 5 ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದರು. ವಂಚನೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.