ತುಮಕೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ಅನುಮಾನ ಮೂಡಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 7 ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿರುವುದು ಅನುಮಾನ ಮೂಡಿಸಿದೆ ಎಂದರು.
ಬಿಜೆಪಿ ಪಕ್ಷ ಗ್ರಾ.ಪಂ ಮಟ್ಟದಲ್ಲಿ ಅಭಿವೃದ್ದಿ ಮಾಡಿಲ್ಲ. ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲ ಇರುವ ಸದಸ್ಯರು ಹೆಚ್ಚಿದ್ದು, ರಾಜೇಂದ್ರ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಬೆಲೆ ಏರಿಕೆ ತಡೆಯಲು ವಿಫಲರಾಗಿದ್ದಾರೆ. ಬೆಲೆ ಇಳಿಸಿ ಜನರಿಗೆ ರಕ್ಷಣೆ ಮಾಡುತ್ತೇನೆಂದು ಸಿಎಂ ಬೊಮ್ಮಾಯಿ ಭರವಸೆ ನೀಡಿಲ್ಲ. ಈಗಾಗಲೇ ಲಂಚ ಕೊಡುವ ಬಗ್ಗೆ ಗುತ್ತಿಗೆದಾರರ ಸಂಘ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇವೆಲ್ಲ ಗಮನಿಸಿದರೆ ಕಾಂಗ್ರೆಸ್ ಪಕ್ಷ ಖಂಡಿತವಾಗಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ. ತುಮಕೂರಿನಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಎದುರಾಳಿಗಳಿದ್ದು, ಕಾಂಗ್ರೆಸ್ಗೆ ಜಿಲ್ಲೆಯಲ್ಲಿ ಹೆಚ್ಚಿನ ಸದಸ್ಯರಿದ್ದಾರೆ ಎಂದು ತಿಳಿಸಿದರು.
ಓದಿ: ರಮೇಶ್ ಜಾರಕಿಹೊಳಿ ಥೂ ಥೂ ಹೇಳಿಕೆಗೆ ಪ್ರತಿಕ್ರಿಯಿಸಲು ಸಮಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್