ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ಹದಿಗುಂಟೆ ಗ್ರಾಮದಲ್ಲಿ ಜೂಜಾಡುತ್ತಿದ್ದ 12 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪಣಕ್ಕಿಟ್ಟಿದ್ದ 1 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 12 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 16 ಬೈಕ್ಗಳು, 11 ಮೊಬೈಲ್ಗಳು ಮತ್ತು ಪಣಕ್ಕಿಟ್ಟಿದ್ದ 1,01,160 ರೂ. ವಶಕ್ಕೆ ಪಡೆದಿದ್ದಾರೆ.
ಸಿರಾ ತಾಲೂಕಿನ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.