ತುಮಕೂರು : ಜಿಲೆಟಿನ್ ಸ್ಫೋಟಗೊಂಡು ಮನೆ ಕುಸಿದು ಬಿದ್ದಿರುವ ಘಟನೆ ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ.
ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ ಎಂಬುವರ ಮನೆಯಲ್ಲಿ ಜಿಲೆಟಿನ್ ಕಡ್ಡಿಗಳನ್ನು ಇರಿಸಲಾಗಿತ್ತು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಸ್ಫೋಟಗೊಂಡಿದ್ದು, ಮನೆ ಗೋಡೆ ಕುಸಿದುಬಿದ್ದಿದೆ. ಮನೆ ಹೊರಗಿದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಶಿವಮೊಗ್ಗ ಜಿಲೆಟಿನ್ ಸ್ಫೋಟ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಶಾಸಕ ಯತ್ನಾಳ್
ಘಟನೆ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.