ತುಮಕೂರು : ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅಧ್ಯಯನಪೀಠ ಸ್ಥಾಪನೆಗೆ ಸಿಂಡಿಕೇಟ್ ನಿರ್ಧರಿಸಿದೆ. ಅದಕ್ಕೆ ಬೇಕಾದ ಸಹಾಯವನ್ನು ಸರ್ಕಾರದ ವತಿಯಿಂದ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಅಧ್ಯಯನ ಪೀಠ ಆರಂಭ ಮಾಡುವುದು, ಬಿಡುವುದು ತುಮಕೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ್ದು. ವಿವಿ ಒಪ್ಪಿಕೊಂಡರೆ ಖಂಡಿತವಾಗಿಯೂ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆ ಆಗಲಿದೆ ಎಂದು ಹೇಳಿದರು.
ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬದಲಾವಣೆ ಚರ್ಚೆ ನಡೆದಿಲ್ಲ: ಸಿಎಂ ಸ್ಪಷ್ಟನೆ