ತುಮಕೂರು: ಕುಣಿಗಲ್ ತಾಲೂಕಿನ ನಿಡಸಾಲೆ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲ್ಪಡುವ ವಿಶ್ವಾಸ ನಿರ್ಣಯಕ್ಕೆ ಹಾಜರಾಗದಂತೆ ಗ್ರಾಮ ಪಂಚಾಯತ ಸದಸ್ಯನೊಬ್ಬನನ್ನು ಯಡಿಯೂರು ಸಮೀಪದ ಹೋಟೆಲ್ ಬಳಿ ದುಷ್ಕರ್ಮಿಗಳು ವ್ಯವಸ್ಥಿತವಾಗಿ ಅಪಹರಣ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗ್ರಾಮ ಪಂಚಾಯತ್ ಸದಸ್ಯ ಮಂಜುನಾಥ್ ಎಂಬುವರನ್ನು ದುಷ್ಕರ್ಮಿಗಳು ಅಪಹರಿಸಿದ್ದು, ಈ ಸಂಬಂಧ ಗ್ರಾ.ಪಂ ಸದಸ್ಯ ಪ್ರವೀಣ್ ಎಂಬುವರು ಅಮೃತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಸೈಟ್ ಖರೀದಿ ನೆಪದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್.. 20 ಲಕ್ಷ ರೂ. ಪೀಕಿದ್ದ ಖದೀಮರು ಅರೆಸ್ಟ್