ETV Bharat / state

ಪಕ್ಷಾಂತರ ಪರ್ವ.. ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರಿದ ಮಾಜಿ ಶಾಸಕ ಎಚ್​ ನಿಂಗಪ್ಪ

author img

By

Published : Nov 29, 2022, 3:52 PM IST

ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಎಚ್. ನಿಂಗಪ್ಪ ಜೆಡಿಎಸ್​​ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​​ ಸೇರ್ಪಡೆಯಾಗಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.

h-ningappa-left-jds-and-joined-congress
ಜೆಡಿಎಸ್​​ನಲ್ಲಿ ಪಕ್ಷಾಂತರ ಪರ್ವ : ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರಿದ ಎಚ್​ ನಿಂಗಪ್ಪ

ತುಮಕೂರು : ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷದ ಶಾಸಕರು ಹಾಗೂ ಮುಖಂಡರು ಪಕ್ಷ ಬಿಟ್ಟು ಬೇರೆ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಗುಬ್ಬಿ ಜೆಡಿಎಸ್ ಶಾಸಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದೀಗ ಕುಣಿಗಲ್ ಕ್ಷೇತ್ರದ ಮಾಜಿ ಶಾಸಕ ಎಚ್. ನಿಂಗಪ್ಪ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಇವರು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಇದು ಸಾಧ್ಯವಿಲ್ಲ ಎಂದು ತಿಳಿದು ಜೆಡಿಎಸ್​​ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿರುವ ನಿಂಗಪ್ಪ ಟಿಕೆಟ್ ಪಡೆದು ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಜೆಡಿಎಸ್​ ಬಿಟ್ಟು ಕಾಂಗ್ರೆಸ್​ ಸೇರಿದ ಎಚ್.​ ನಿಂಗಪ್ಪ : ಇನ್ನು ನಿಂಗಪ್ಪ ಅವರು ಈಗಾಗಲೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ ಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 2004ರಲ್ಲಿ ಕುಣಿಗಲ್ ಕ್ಷೇತ್ರದಿಂದ ಶಾಸಕರಾಗಿದ್ದ ಎಚ್.ನಿಂಗಪ್ಪ ಅವರು 2008ರಲ್ಲಿ ತುಮಕೂರು ಗ್ರಾಮಾಂತರದಿಂದ ಸ್ಪರ್ಧಿಸಿ ಸೋತಿದ್ದರು. 2013ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಸಿಗದಿದ್ದಾಗ ಕೆಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಅಲ್ಲಿ ಸೋತ ಬಳಿಕ ಕಾಂಗ್ರೆಸ್ ಸೇರಿದ್ದರು. 2018ರಲ್ಲಿ ಮತ್ತೆ ಕಾಂಗ್ರೆಸ್​ ತೊರೆದು ಜೆಡಿಎಸ್‌ಗೆ ಮರಳಿದ್ದರು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧೆ : ಈ ಹಿಂದೆ ಜೆಡಿಎಸ್ ಕಾರ್ಯದರ್ಶಿ ಹಾಗೂ ಉಸ್ತುವಾರಿಯಾಗಿ ನೇಮಿಸುವುದಾಗಿ ಕುಮಾರಸ್ವಾಮಿ ಅವರು ಆದೇಶ ಪತ್ರ ನೀಡಿದ್ದರು. ಆದರೆ, ಅದು ಪತ್ರವಾಗಿಯೇ ಉಳಿಯಿತು ಎಂದು ನಿಂಗಪ್ಪ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ನನ್ನ ದೂರ ಇಟ್ಟಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೇರುವುದಾಗಿ ಎಚ್ ನಿಂಗಪ್ಪ ಮಾಹಿತಿ ನೀಡಿದ್ದು, 2023ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ : ಮಾಜಿ ಸಿಎಂ ಕುಮಾರಸ್ವಾಮಿ ಅಸ್ಪೃಶ್ಯತೆ ಪದ ಬಳಕೆ ಆರೋಪ: ದಲಿತ ಸಂಘಟನೆ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.