ETV Bharat / state

ಗಡಿ ವಿವಾದ.. ಮಹಾರಾಷ್ಟ್ರ  ಕರ್ನಾಟಕದ ಮುಖ್ಯಮಂತ್ರಿಗಳು ನಾಟಕವಾಡುತ್ತಿದ್ದಾರೆ: ಹೆಚ್​ಡಿಕೆ

ಮಹಾರಾಷ್ಟ್ರ ಗಡಿ ಭಾಗದಲ್ಲಿ ವಾಸ ಮಾಡುತ್ತಿರುವ ಕನ್ನಡಿಗರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಗಡಿ ವಿವಾದದ ವಿಚಾರದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ನಾಟಕವಾಡುತ್ತಿದ್ದು, ವಾಸ್ತವ ಅಂಶವನ್ನು ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಆಗ್ರಹಿಸಿದರು.

hd kumaraswamy
ಹೆಚ್​ ಡಿ ಕುಮಾರಸ್ವಾಮಿ
author img

By

Published : Dec 3, 2022, 2:36 PM IST

ತುಮಕೂರು: ಗಡಿ ವಿವಾದದ ವಿಚಾರದಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ನಾಟಕವಾಡುತ್ತಿದ್ದಾರೆ. ಎರಡು ರಾಜ್ಯದ ಮುಖ್ಯಮಂತ್ರಿಗಳು ವಾಸ್ತವ ಅಂಶವನ್ನು ಹೇಳಬೇಕು, ಈ ನಾಟಕಕ್ಕೆ ಅವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದರು.

ಇಂದು ಕೊರಟಗೆರೆ ತಾಲೂಕು ವ್ಯಾಪ್ತಿಯಲ್ಲಿ ಪಂಚರತ್ನ ರಥಯಾತ್ರೆ ಸಾಗಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿ ಭಾಗದಲ್ಲಿ ವಾಸ ಮಾಡುತ್ತಿರುವ ಕನ್ನಡಿಗರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಅದೇ ರೀತಿಯ ವ್ಯವಸ್ಥೆಯನ್ನು ರಾಜ್ಯದ ಗಡಿಭಾಗದಲ್ಲಿ ವಾಸಿಸುತ್ತಿರುವ ಅನ್ಯ ಭಾಷಿಗರಿಗೂ ಕಲ್ಪಿಸಿ ಕೊಡುವಂತಹ ಉದಾರತೆಯನ್ನು ರಾಜ್ಯದ ಮುಖ್ಯಮಂತ್ರಿಗಳು ತೋರಬೇಕು ಎಂದು ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪರಮೇಶ್ವರ್ ಅವರು ಸೋಲಬೇಕು, ಗೆಲ್ಲಬೇಕು ಎಂಬ ವಿಚಾರ ನನಗೆ ಬೇಕಿಲ್ಲ. ಆದರೆ, ಜೆಡಿಎಸ್ ಸರ್ಕಾರ ಬರಬೇಕು ಎಂದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ತುಮಕೂರಿನಲ್ಲಿ ಜೆಡಿಎಸ್​ ರಥಯಾತ್ರೆ.. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಹೆಚ್​ಡಿಕೆ

ಈ ಹಿಂದೆ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೇ ಅವರ ಪಕ್ಷದವರೇ ಅವರನ್ನು ಸೋಲಿಸಿದ್ದರು. ಕಾಂಗ್ರೆಸ್​ನಿಂದ ದಲಿತ ಸಿಎಂ ಎಂಬ ಮಾತು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರ ಪಕ್ಷದವರೇ ಹೇಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಬಾಲಕ ಸಾವು.. ಹೆಚ್​ಡಿಕೆ ಎದುರು ಶವವಿಟ್ಟು ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.