ETV Bharat / state

ಶಿರಾ ಉಪಕದನ: ಜೆಡಿಎಸ್ ಅಭ್ಯರ್ಥಿ ಪರ ಹೆಚ್​ಡಿಕೆ ಮತ ಪ್ರಚಾರ - shira by election updates

ಶಿರಾ ತಾಲೂಕಿನ ಮೇಲ್ಕುಂಟೆ ಗ್ರಾಮದಲ್ಲಿ ರೋಡ್ ಶೋ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.

HDK vote campaign far of JDS candidate Ammajamma
ಅಭ್ಯರ್ಥಿ ಪರ ಹೆಚ್​ಡಿಕೆ ಬಿರುಸಿನ ಪ್ರಚಾರ
author img

By

Published : Oct 24, 2020, 3:22 PM IST

Updated : Oct 24, 2020, 3:27 PM IST

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಮ್ಮಜಮ್ಮ ಪರವಾಗಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಿರುಸಿನ ಪ್ರಚಾರ ಕೈಗೊಂಡರು. ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಮಹಿಳೆಯರು ಆರತಿ ಬೆಳಗಿ ಆತ್ಮೀಯವಾಗಿ ಬರಮಾಡಿಕೊಂಡರು.

ಹೆಚ್​ಡಿಕೆ ಮತ ಪ್ರಚಾರ

ರೋಡ್ ಶೋ ಸಂದರ್ಭದಲ್ಲಿ ನೆರೆದಿದ್ದ ನೂರಾರು ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ಬಗರ್ ಹುಕುಂ ಸಾಗುವಳಿ ಚೀಟಿಯನ್ನು ಸತ್ಯನಾರಾಯಣ ಅವರು ಫಲಾನುಭವಿಗಳಿಗೆ ಕೊಡಿಸಿದ್ದಾರೆ. ಶಾಲೆ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಸಣ್ಣ-ಪುಟ್ಟ ಸಮುದಾಯಗಳನ್ನು ಗುರುತಿಸಿ ರಾಜಕೀಯ ಶಕ್ತಿಯನ್ನು ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಲು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕಾಗಿ ಮನವಿ ಮಾಡಿದರು.

Last Updated : Oct 24, 2020, 3:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.