ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ವೊಬ್ಬರು ವ್ಯಕ್ತಿಯೊಬ್ಬರಿಗೆ ಠಾಣೆಯಲ್ಲಿಯೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಥಳಿಸಿರುವ ಘಟನೆ ನಡೆದಿದೆ. ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದು, ವೈರಲ್ ಆಗಿರುವ ವಿಡಿಯೋವನ್ನು ವೀಕ್ಷಿಸಿದ್ದೇನೆ. ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ ವರ್ತನೆ ಕುರಿತು ಇಲಾಖೆ ತನಿಖೆ ನಡೆಸುವಂತೆ ಸೂಚಿಸಲಾಗಿದ್ದು, ಹೆಡ್ ಕಾನ್ಸ್ಟೇಬಲ್ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಗಂಡ ಹೆಂಡತಿ ನಡುವಿನ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಠಾಣೆಗೆ ವ್ಯಕ್ತಿ ಬಂದ ವೇಳೆ ಈ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.
(ಓದಿ: 2 ಸಾವಿರಕ್ಕಾಗಿ ಗಂಡ ಹೆಂಡತಿ ನಡುವೆ ಕಿತ್ತಾಟ.. ಪೋಷಕರ ಮನೆಗೆ ಕರೆಸಿ ಪತಿಗೆ ಥಳಿತ.. ಆ್ಯಸಿಡ್ ಎರಚಿ ಕ್ರೌರ್ಯ)