ತುಮಕೂರು: ನಗರದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದ ಪರಿಣಾಮ ಹತ್ತಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.
ಟೌನ್ ಹಾಲ್ ವೃತ್ತ, ಅಶೋಕ ರಸ್ತೆ ಸೇರಿದಂತೆ ವಿವಿಧ ರಸ್ತೆಗಳ ತುಂಬೆಲ್ಲಾ ಮರದ ಕೊಂಬೆಗಳು ನೆಲಕ್ಕೆ ಬಿದ್ದು ಅವಾಂತರ ಸೃಷ್ಟಿಯಾಗಿತ್ತು. ಲಾಕ್ಡೌನ್ ಹಿನ್ನೆಲೆ ನಗರದ ಸುತ್ತಲೂ 12 ಕಡೆ ತೆರೆಯಲಾಗಿರುವ ಚೆಕ್ ಪೋಸ್ಟ್ಗಳಲ್ಲಿ ಪೊಲೀಸ್ ಸಿಬ್ಬಂದಿ ಮಳೆಯಿಂದ ತಪ್ಪಿಸಿಕೊಳ್ಳಲು ಪರದಾಡಿದರು.