ತುಮಕೂರು: ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿರುವ ಸೋಮಿ ಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆಯುತ್ತಿರೋ ಮಠದ 19ನೇ ಗುರುಗಳಾದ ಶ್ರೀ ಕರಿಬಸವ ಸ್ವಾಮಿಗಳ ವಾರ್ಷಿಕ ಸ್ಮರಣೋತ್ಸವ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವದಲ್ಲಿ ನಡೆದ ಹೋಮ ಹವನದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.
ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಹೋಮ-ಹವನ ನಡೆಯುತ್ತಿವೆ. ಕರಿ ವೃಷಭ ದೇಶಿ ಕೇಂದ್ರ ಶಿವಯೋಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗುತ್ತಿವೆ.
ಮಠದ ಆವರಣದಲ್ಲಿ ನಡೆದ ದುರ್ಗಾ ಹೋಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಾಲ್ಗೊಂಡು ಭಕ್ತಿ ಸಮರ್ಪಣೆ ಮಾಡಿದರು. ತಿಪಟೂರು ಶಾಸಕ ನಾಗೇಶ್ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಸಹ ಭಾಗಿಯಾಗಿದ್ರು.
ಇದನ್ನೂ ಓದಿ:ನಟ ಮಿಥುನ್ ಚಕ್ರವರ್ತಿ ಭೇಟಿಯಾದ ಬಿಜೆಪಿಯ ಕೈಲಾಶ್ ವಿಜಯವರ್ಗಿಯಾ