ತುಮಕೂರು : ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಪಾದಯಾತ್ರೆ , ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತಿದ್ದಂತೆ ಸ್ವಾಗತಿಸುತ್ತೇನೆ ಆದರೆ, ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಂಡಾಯ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ. ಈಗಾಗಲೇ ಡಿಕೆ ಸುರೇಶ ಅವರು ಹೇಳಿದಂತೆ ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಪಾದಯಾತ್ರೆಗೆ ಭಾಗವಹಿಸುವಂತೆ ಕರೆ ನೀಡಿದ್ದಾರೆ. ಅದರಂತೆ ನಾನು ನನ್ನ ವಿಧಾನಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಂತೆ ಅವರನ್ನು ಸ್ವಾಗತಿಸುತ್ತೇನೆ. ಆದರೆ, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಭಾರತ ಜೋಡೋ ಯಾತ್ರೆ ಒಳ್ಳೆ ಉದ್ದೇಶ ಇಟ್ಟುಕೊಂಡು ನಡೆಯುತ್ತಿರಬಹುದು. ಇದರಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡರು ಆಹ್ವಾನ ನೀಡಿದ್ದಾರೆ. ನನ್ನ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು.
ಇದನ್ನೂ ಓದಿ : ಬೊಮ್ಮಾಯಿ ಇಸ್ ಹೆಡ್ ಆಫ್ ದಿ ಗವರ್ನಮೆಂಟ್.. ಜಾತಿಗೂ ಭ್ರಷ್ಟಾಚಾರಕ್ಕೂ ಏನು ಸಂಬಂಧ: ಸಿದ್ದರಾಮಯ್ಯ ವಾಗ್ದಾಳಿ