ETV Bharat / state

ಸುರೇಶ್ ಗೌಡರ ದಬ್ಬಾಳಿಕೆಗೆ ಕಡಿವಾಣ ಹಾಕಿದ್ದೇನೆ : ಶಾಸಕ ಡಿ. ಸಿ .ಗೌರಿಶಂಕರ್ - suresh gowda oppression

ಮಾಜಿ ಶಾಸಕ ಸುರೇಶ್ ಗೌಡ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ನನ್ನ ಮೇಲೆ ಪುರಾವೆ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರನ್ನು ಸುರೇಶ್​ ಗೌಡ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಹೀಗಾಗಿ ಕ್ಷೇತ್ರದ ಮತದಾರರು ಅವರನ್ನು ಸೋಲಿಸಿದ್ದಾರೆ ಎಂದರು.

ಶಾಸಕ ಡಿ. ಸಿ .ಗೌರಿಶಂಕರ್
author img

By

Published : Mar 2, 2019, 1:42 PM IST

ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಈ ಹಿಂದೆ ಶಾಸಕರಾಗಿದ್ದ ಸುರೇಶ್ ಗೌಡರಿಂದ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಿತಿ ಮೀರಿತ್ತು. ಇದಕ್ಕೆ ಕಡಿವಾಣ ಹಾಕಿದ್ದೇನೆ ಎಂದು ಶಾಸಕ ಡಿ. ಸಿ. ಗೌರಿಶಂಕರ್ ಹೇಳಿದರು.

ಗೌರಿಶಂಕರ್ ಎಂಎಸ್​ಐಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಾಲೂಕು ಹೊನ್ನುಡಿಕೆ ಗ್ರಾಮದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುರೇಶ್ ಗೌಡ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ನನ್ನ ಮೇಲೆ ಪುರಾವೆ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರನ್ನು ಸುರೇಶ್​ ಗೌಡ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಹೀಗಾಗಿ ಕ್ಷೇತ್ರದ ಮತದಾರರು ಅವರನ್ನು ಸೋಲಿಸಿದ್ದಾರೆ ಎಂದರು.

ಶಾಸಕ ಡಿ. ಸಿ .ಗೌರಿಶಂಕರ್
ಶಾಸಕ ಡಿ. ಸಿ .ಗೌರಿಶಂಕರ್

ಎಂಎಸ್ಐಎಲ್ ಅಭಿವೃದ್ಧಿ ನಿಗಮವನ್ನು ಲಾಭದಾಯಕವನ್ನಾಗಿಸುತ್ತೇನೆ ಎಂಬ ವಿಶ್ವಾಸದಿಂದ ಮುಖ್ಯಮಂತ್ರಿ ಅವರು ನನ್ನನ್ನು ನೇಮಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮತದಾರರು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೈ ಬಲಪಡಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಬಂದಿದ್ದ ಮಹಿಳೆಯರಿಗೆ ಅರಿಶಿನ, ಕುಂಕುಮ, ಹೂವು, ಎಲೆ ಅಡಿಕೆಯನ್ನು ಜೆಡಿಎಸ್ ಕಾರ್ಯಕರ್ತರು ವಿತರಣೆ ಮಾಡಿದ್ದು, ವಿಶೇಷವಾಗಿತ್ತು.

Intro:Body:

ಸ್ಟೇಟ್18

ಫೇಸ್​ಬುಕ್ ಹಾಕಿ

ಸುರೇಶ್ ಗೌಡರ ದಬ್ಬಾಳಿಕೆಗೆ ಕಡಿವಾಣ ಹಾಕಿದ್ದೇನೆ : ಶಾಸಕ ಡಿ. ಸಿ .ಗೌರಿಶಂಕರ್ 

ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಈ ಹಿಂದೆ ಶಾಸಕರಾಗಿದ್ದ ಸುರೇಶ್ ಗೌಡರಿಂದ ಅಧಿಕಾರಿಗಳ ಮೇಲೆ ದಬ್ಬಾಳಿಕೆ ಮಿತಿ ಮೀರಿತ್ತು. ಇದಕ್ಕೆ ಕಡಿವಾಣ ಹಾಕಿದ್ದೇನೆ ಎಂದು ಶಾಸಕ ಡಿ. ಸಿ. ಗೌರಿಶಂಕರ್ ಹೇಳಿದರು.

ಗೌರಿಶಂಕರ್ ಎಂಎಸ್​ಐಎಲ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಾಲೂಕು ಹೊನ್ನುಡಿಕೆ ಗ್ರಾಮದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುರೇಶ್ ಗೌಡ ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ನನ್ನ ಮೇಲೆ ಪುರಾವೆ ಇಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರನ್ನು ಸುರೇಶ್​ ಗೌಡ ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಹೀಗಾಗಿ ಕ್ಷೇತ್ರದ ಮತದಾರರು ಅವರನ್ನು ಸೋಲಿಸಿದ್ದಾರೆ ಎಂದರು.

ಎಂಎಸ್ಐಎಲ್ ಅಭಿವೃದ್ಧಿ ನಿಗಮವನ್ನು ಲಾಭದಾಯಕವನ್ನಾಗಿಸುತ್ತೇನೆ ಎಂಬ ವಿಶ್ವಾಸದಿಂದ ಮುಖ್ಯಮಂತ್ರಿ ಅವರು ನನ್ನನ್ನು ನೇಮಿಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮತದಾರರು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೈ ಬಲಪಡಿಸಲಿದ್ದಾರೆ ಎಂದರು. 

ಕಾರ್ಯಕ್ರಮದಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಬಂದಿದ್ದ ಮಹಿಳೆಯರಿಗೆ ಅರಿಶಿನ, ಕುಂಕುಮ, ಹೂವು, ಎಲೆ ಅಡಿಕೆಯನ್ನು ಜೆಡಿಎಸ್ ಕಾರ್ಯಕರ್ತರು ವಿತರಣೆ ಮಾಡಿದ್ದು, ವಿಶೇಷವಾಗಿತ್ತು. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.