ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯಶವಂತಪುರ ಕ್ಷೇತ್ರದ ನೂತನ ಶಾಸಕ ಸೋಮಶೇಖರ್, ಮಠದಲ್ಲಿ ನಡೆಯುತ್ತಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಸುಮಾರು ಹತ್ತು ನಿಮಿಷಗಳ ಕಾಲ ಮಠದ ಮಕ್ಕಳೊಂದಿಗೆ ಕುಳಿತು ಪ್ರಾರ್ಥನೆ ಮಾಡಿದರು. ಇವರೊಂದಿಗೆ ಬಂದಿದ್ದ ಯಶವಂತಪುರ ಕ್ಷೇತ್ರದ ಬಿಜೆಪಿ ಮುಖಂಡರು ಕೂಡ ಈ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆಗೆ ಭೇಟಿ ನೀಡಿ ದರ್ಶನ ಪಡೆದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಸೋಮಶೇಖರ್, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ವೇಳೆ, ನನ್ನನ್ನು ಮಂತ್ರಿ ಮಾಡುತ್ತಾರೆ ನನಗೆ ಮತ ಕೊಡಿ ಎಂದು ಮತದಾರರ ಬಳಿ ನಾನು ಕೇಳಲಿಲ್ಲ. ಬದಲಾಗಿ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಮತ ಕೊಡಿ ಎಂದು ಕೇಳಿದ್ದೇನೆ ಎಂದರು.