ETV Bharat / state

ತುಮಕೂರು ಜಿಲ್ಲೆಯಲ್ಲಿ 2 ಲಕ್ಷ ಮಂದಿಗೆ ಕೋವಿಡ್​​​ ವ್ಯಾಕ್ಸಿನ್​​

ನಿತ್ಯ 2,500 ಮಂದಿಗೆ ವ್ಯಾಕ್ಸಿನ್​​​ ನೀಡುವಂತೆ ಪ್ರತಿ ತಾಲೂಕಿಗೆ ಟಾರ್ಗೆಟ್ ನೀಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 2,00,000 ಮಂದಿಗೆ ಕೋವಿಡ್​​ ವ್ಯಾಕ್ಸಿನ್ ನೀಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Covid vaccine for 2 lakh people of tumkur
ತುಮಕೂರು: 2 ಲಕ್ಷ ಮಂದಿಗೆ ಕೋವಿಡ್​​​ ವ್ಯಾಕ್ಸಿನ್​​
author img

By

Published : Apr 13, 2021, 7:57 AM IST

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಇದ್ದು, ಜಿಲ್ಲಾಡಳಿತ ಹೆಚ್ಚು ಹೆಚ್ಚು ವ್ಯಾಕ್ಸಿನ್ ನೀಡುವ ಗುರಿ ಹೊಂದಿದೆ. ಈಗಾಗಲೇ ಜಿಲ್ಲೆಯ 2,00,000 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.

ಕೋವಿಡ್​​​ ವ್ಯಾಕ್ಸಿನ್​​ - ಡಿಸಿ ಪ್ರತಿಕ್ರಿಯೆ

ಸೋಮವಾರ 195 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ತುಮಕೂರು ನಗರದಲ್ಲಿ 93, ಶಿರಾ ತಾಲೂಕಿನಲ್ಲಿ 24 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 1,423 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಜಿಲ್ಲಾ ಆಸ್ಪತ್ರೆಯಲ್ಲಿ ಇರುವ ಐಸಿಯು ಬೆಡ್​​ಗಳಲ್ಲಿ ಸೋಂಕಿತರಿದ್ದು, ಬೆಡ್​ಗಳ ಕೊರತೆ ಎದುರಾಗಿದೆ. ಹೀಗಾಗಿ ವ್ಯಾಕ್ಸಿನ್ ಪಡೆಯಲು ಜಿಲ್ಲೆಯ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 2,00,000 ಮಂದಿಗೆ ಕೋವಿಡ್​​ ವ್ಯಾಕ್ಸಿನ್ ನೀಡಲಾಗಿದೆ. ಜಿಲ್ಲೆಯಾದ್ಯಂತ ಪ್ರತಿದಿನ 25 ಸಾವಿರ ಮಂದಿಗೆ ವ್ಯಾಕ್ಸಿನ್ ನೀಡುವ ಗುರಿ ಹೊಂದಲಾಗಿದೆ.

ಗುರಿ ತಲುಪಲು ಈಗಾಗಲೇ ಎಲ್ಲಾ ಇಲಾಖೆಗಳ ಸಹಕಾರವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲದೇ ಪ್ರತಿ ತಾಲೂಕಿನಾದ್ಯಂತ ವ್ಯಾಕ್ಸಿನ್ ನೀಡುವ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೊನ ಲಸಿಕಾ ಅಭಿಯಾನ ಪ್ರಾರಂಭ

ನಿತ್ಯ 2,500 ಮಂದಿಗೆ ವ್ಯಾಕ್ಸಿನ್​​​ ನೀಡುವಂತೆ ಪ್ರತಿ ತಾಲೂಕಿಗೆ ಟಾರ್ಗೆಟ್ ನೀಡಲಾಗಿದೆ. ಜಿಲ್ಲೆಯ 10 ತಾಲೂಕುಗಳ ಪೈಕಿ ಕೆಲ ತಾಲೂಕುಗಳಲ್ಲಿ ಜನರು ಸ್ವಯಂ ಪ್ರೇರಿತರಾಗಿ ಬಂದು ವ್ಯಾಕ್ಸಿನ್​​ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.