ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 49ರಷ್ಟು ಹೆಚ್ಚಿನ ಮಳೆಯಾಗಿದೆ. 405 ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೃಷಿ ಚಟುವಟಿಕೆ ಭರದಿಂದ ಸಾಗಿದೆ.
ಈ ಬಾರಿ ಕಾಲಕ್ಕೆ ಸರಿಯಾಗಿ ಮಳೆಯಾಗಿರುವ ಹಿನ್ನೆಲೆ ರೈತರು ಕೂಡ ಅಪಾರ ಪ್ರಮಾಣದಲ್ಲಿ ರಾಗಿ, ಶೇಂಗಾ ಬಿತ್ತನೆ ಮಾಡಿದ್ದಾರೆ. ಪ್ರಮುಖವಾಗಿ 1.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆ ಗುರಿ ಹೊಂದಲಾಗಿದೆ. 1.22 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬಿತ್ತನೆ ಗುರಿ ಇರಿಸಿಕೊಳ್ಳಲಾಗಿದೆ.
ಒಟ್ಟು 3,81,300 ಹೆಕ್ಟೇರ್ ಪೈಕಿ 2,94,900 ಹೆಕ್ಟೇರ್ ಅಂದರೆ ಶೇಕಡಾ 77ರಷ್ಟು ಬಿತ್ತನೆಯಾಗಿದೆ. ಅಲ್ಲದೆ ಈ ಬಾರಿ ಉತ್ತಮ ಇಳುವರಿ ದೊರೆಯುವ ನಿರೀಕ್ಷೆ ಹೊಂದಲಾಗಿದೆ.