ತುಮಕೂರು: ತಾಲೂಕಿನ ಕೈದಾಳ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕರೊಬ್ಬರನ್ನು ಪೋಷಕರು ಥಳಿಸಿದ ಘಟನೆ ನಡೆದಿದೆ.
ವಿದ್ಯಾರ್ಥಿನಿಯರನ್ನು ಕರೆಸಿ ಅಸಭ್ಯವಾಗಿ ಪ್ರಶ್ನೆ ಕೇಳಿದ್ದ ಎನ್ನಲಾಗಿದೆ. ಹೀಗಾಗಿ ಪೋಷಕರು ಶಾಲೆಗೆ ಬಂದು ಶಿಕ್ಷಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಮಹಿಳೆಯರೂ ಕೂಡ ಆಗಮಿಸಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಆದ್ರೆ ವೈಯಕ್ತಿಕ ಸ್ವಚ್ಛತೆ ಬಗ್ಗೆ ಪ್ರಶ್ನೆ ಕೇಳಿದ್ದೇನೆ ಎಂದು ಶಿಕ್ಷಕ ಸಮರ್ಥಿಸಿಕೊಂಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪರಿಸ್ಥಿತಿ ಹತೋಟಿಗೆ ತಂದರು. ನಂತರ ಪೋಷಕರ ಮಾತುಗಳನ್ನು ಆಲಿಸಿ, ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.