ETV Bharat / state

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಗಾಲಿ ಜನಾರ್ದನ ರೆಡ್ಡಿ - Etv Bharat Kannada

ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.

janardhana reddy visited to siddaganga matha
ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಗಾಲಿ ಜನಾರ್ದನ ರೆಡ್ಡಿ
author img

By

Published : Dec 19, 2022, 3:43 PM IST

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಗಾಲಿ ಜನಾರ್ದನ ರೆಡ್ಡಿ

ತುಮಕೂರು: ಜಿಲ್ಲೆಯ ಸಿದ್ಧಗಂಗಾ ಮಠಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರು ಭೇಟಿ ನೀಡಿ ಶಿವಕುಮಾರ ಶ್ರೀಗಳ ಮೂರ್ತಿ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ಇವತ್ತು ಶುಭ ಸೋಮವಾರವಾದ ಹಿನ್ನೆಲೆ, ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಳ್ಳಲು ಬಂದಿದ್ದೇನೆ. ಬಸವಣ್ಣನವರ ಕಾಯಕವೇ ಕೈಲಾಸ ಮಾತನ್ನು ಅಕ್ಷರ ಸಹ ಪಾಲಿಸಿ, ಸುದ್ದಿ, ಪ್ರಚಾರಕ್ಕಾಗಿ ಸೇವೆ ಮಾಡದೆ, ಜಗತ್ತೇ ನೋಡುವಂತೆ ಸೇವೆ ಸಲ್ಲಿಸಿದವರು ಶ್ರೀಗಳು. ಕಳೆದ 34 ವರ್ಷಗಳಿಂದಲೂ ಮಠಕ್ಕೆ ಭೇಟಿ ನೀಡಿ ಚಿಕ್ಕಂದಿನಿಂದಲು ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದೇನೆ. ಅವರು ಲಿಂಗೈಕ್ಯರಾದಾಗಲೂ ನಾನು ಇಲ್ಲಿಗೆ ಬಂದಿದ್ದೆ. ಅದಾದ ನಂತರ ಇಂದು ಈ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಹೇಳಿದರು.

ನಾನು ಸಾರ್ವಜನಿಕ ಬದುಕಿಗೆ ವಾಪಸ್ ಬರಬೇಕು ಎಂದು ನಿರ್ಧರಿಸಿದ್ದು, ಅದಕ್ಕಾಗಿ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದುಕೊಳ್ಳಲು ಆಗಮಿಸಿದ್ದೇನೆ. ಸಾರ್ವಜನಿಕ ಬದುಕಿಗೆ ಬರಬೇಕು ಅಂತ ತೀರ್ಮಾನ ಮಾಡಿದ್ದೇನೆ. ಎಲ್ಲಾ ಮಠಗಳಿಗೂ ಭೇಟಿ ನೀಡುತ್ತಿದ್ದೇನೆ. ಸಾರ್ವಜನಿಕ ಬದುಕು ಪ್ರಾರಂಭಿಸಬೇಕಾದರೆ ಜನರ ಆಶೀರ್ವಾದ ಬೇಕು, ಹೀಗಾಗಿ ಎಲ್ಲಾ ಕಡೆ ಹೋಗುತ್ತಿದ್ದೇನೆ. ಶಿವಕುಮಾರ ಶ್ರೀಗಳು ಜಾತಿ, ಮತ ಭೇದ ಮಾಡದೆ ಮಕ್ಕಳಿಗೆ ವಿದ್ಯಾದಾನ ಮಾಡಿದ್ದಾರೆ. ಅಲ್ಲದೇ ತ್ರಿವಿಧ ದಾಸೋಹವನ್ನು ಮಾಡಿದ್ದಾರೆ. ನಾನು ಅವರ ಮಾರ್ಗದರ್ಶನದಲ್ಲಿಯೇ ಮುಂದೆ ಹೋಗಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ಇನ್ನು ಹೊಸ ಪಕ್ಷವನ್ನು ಕಟ್ಟುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ ಎಂಬ ಪ್ರಶ್ನೆಗೆ, ಡಿ.25 ಕ್ಕೆ ಮಾಧ್ಯಮಗೋಷ್ಟಿ ನಡೆಸಿ ಎಲ್ಲವನ್ನೂ ತಿಳಿಸುತ್ತೇನೆ ಎಂದರು. ಬಳಿಕ ಮಗನ ಸಿನಿಮಾದ ಚಿತ್ರೀಕರಣ ಬಗ್ಗೆ ಮಾತನಾಡಿದ ಅವರು, ಕಿರೀಟಿಯ ಚಿತ್ರಿಕರಣ ನಡೆಯುತ್ತಿದೆ. 80 % ಪರ್ಸೆಂಟ್ ಚಿತ್ರೀಕರಣ ಪೂರ್ಣಗೊಂಡಿದೆ. ಮೈಸೂರು, ಬೆಂಗಳೂರಿನಲ್ಲಿ ಇನ್ನೂ ಎರಡು ತಿಂಗಳು ಚಿತ್ರೀಕರಣ ನಡೆಯಲಿದೆ. ಮಗನಿಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಆಸಕ್ತಿಯಿತ್ತು.‌ ಅಲ್ಲದೇ ಕಿರೀಟಿ ಚಿತ್ರರಂಗದಲ್ಲಿಯೇ ಮುಂದುವರೆಯುತ್ತಾರೆ ಎಂದು ಅಪ್ಪ ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ.. ಕಲಾಪ ನಾಳೆಗೆ ಮುಂದೂಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.