ETV Bharat / state

ತುಮಕೂರು ಜಿಲ್ಲೆಯ 10 ಕ್ಷೇತ್ರಗಳ ಪೈಕಿ ಎಂಟು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ - Etv Bharat Kannada

ತುಮಕೂರಿನ ಎಂಟು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್​ ಪಕ್ಷ ಘೋಷಣೆ ಮಾಡಿದೆ. ಉಳಿದ ಎರಡು ಕ್ಷೇತ್ರಗಳಾದ ಶಿರ ಹಾಗೂ ತಿಪಟೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡದೆ ಪಕ್ಷ ತಡೆಹಿಡಿದಿದೆ.

jds announced candidates name
ಜೆಡಿಎಸ್​ ಅಭ್ಯರ್ಥಿಗಳ ಹೆಸರು ಘೋಷಣೆ
author img

By

Published : Dec 19, 2022, 8:19 PM IST

ತುಮಕೂರು : ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಪೈಕಿ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದ್ದು, ರಾಜಕೀಯ ಚಟುವಟಿಕೆ ಗದಿಗೆದರಿದೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ ಎರಡು ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸೋಲು ಕಂಡಿರುವ ಗೋವಿಂದರಾಜು ಅವರನ್ನು ಪುನಃ ಕಣಕ್ಕಿಳಿಸಲು ಪಕ್ಷದ ಮುಖಂಡರು ಸಿದ್ಧತೆ ನಡೆಸಿದ್ದಾರೆ. ಉಳಿದ ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ..

jds announced name constituencies candidates
ಜೆಡಿಎಸ್ ಅಭ್ಯರ್ಥಿಗಳು

  • ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್,
  • ಮಧುಗಿರಿ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಜೆಡಿಎಸ್ ಶಾಸಕ ವೀರಭದ್ರಯ್ಯ,
  • ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಜೆಡಿಎಸ್ ಶಾಸಕ ಡಿ.ನಾಗರಾಜಯ್ಯ,
  • ತುರುವೇಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಜೆಡಿಎಸ್ ಶಾಸಕ ಎಂ.ಟಿ ಕೃಷ್ಣಪ್ಪ,
  • ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಸುಧಾಕರ್ ಲಾಲ್,
  • ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಸುರೇಶ್ ಬಾಬು,
  • ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ತಿಮ್ಮರಾಯಪ್ಪ ಅವರ ಹೆಸರನ್ನು ಜೆಡಿಎಸ್​ ಪಕ್ಷ ಘೋಷಣೆ ಮಾಡಿದೆ.

ಇನ್ನು, ಶಿರ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡದೆ ತಡೆಹಿಡಿಯಲಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗುವ ವಿಶ್ವಾಸದಲ್ಲಿರುವ ಎಲ್ಲರೂ ಕ್ಷೇತ್ರದಲ್ಲಿ ಬಿರುಸಿನ ಸಂಚಾರ ನಡೆಸಿದ್ದಾರೆ.

ಈಗಾಗಲೇ ಜೆಡಿಎಸ್ ಪಂಚರತ್ನ ಯಾತ್ರೆ ತುಮಕೂರು ಜಿಲ್ಲೆಯ ಕೆಲ ಭಾಗದಲ್ಲಿ ಸಂಚರಿಸಿದ್ದು, ಕುಣಿಗಲ್ ಚಿಕ್ಕನಾಯಕನಹಳ್ಳಿ ತಿಪಟೂರು ಭಾಗದಲ್ಲಿ ಸಂಚಾರ ಮಾಡಬೇಕಿದೆ. ಈ ತಿಂಗಳ ಕೊನೆಯ ವೇಳೆಗೆ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಭಾಗಗಳಲ್ಲಿ ಸಂಚರಿಸಲಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು, ಪಂಚರತ್ನ ಯಾತ್ರೆಯ ಸಂದರ್ಭದಲ್ಲಿ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿರುವ ಅಭ್ಯರ್ಥಿಗಳು, ಕಾರ್ಯಕರ್ತರ ಹಾಗೂ ಕ್ಷೇತ್ರದ ಮತದಾರರ ವಿಶ್ವಾಸ ಗಳಿಸುವಲ್ಲಿ ಸಫಲರಾಗಬೇಕು ಎಂದು ಹೇಳಿರುವುದು ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಹಂಚಿಕೆ ವೇಳೆ ಅಭ್ಯರ್ಥಿಗಳನ್ನು ಬದಲಾಯಿಸುವ ಅಥವಾ ಬದಲಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023: ಜೆಡಿಎಸ್​ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ: 93 ಅಭ್ಯರ್ಥಿಗಳ ಹೆಸರು ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.