ತುಮಕೂರು:ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಗೆಲುವಿಗಾಗಿ ಸರ್ವ ಪ್ರಯತ್ನ ಮಾಡುವುದಾಗಿ ಮಾಜಿ ಶಾಸಕ ತಿಮ್ಮರಾಯಪ್ಪ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಎಸ್ಸಿ, ಎಸ್ಟಿ ಘಟಕದ ಪದಾಧಿಕಾರಿಗಳು ಮತ್ತು ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಜಂಟಿ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಎರಡು ಪಕ್ಷದ ಮೈತ್ರಿ ಧರ್ಮ ಅನ್ವಯ ಈಗಾಗಲೇ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆ ಮಾಡುವ ಒಂದು ಅನಿವಾರ್ಯತೆ ಪಕ್ಷದ ಮುಖಂಡರಿಗೆ ಬಂದೊದಗಿದೆ. ಇದನ್ನು ಚಾಚೂ ತಪ್ಪದೆ ಪಾಲಿಸಬೇಕಾಗಿದೆ ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕಾಗಿದೆ ಎಂದರು.