ETV Bharat / state

ತುಮಕೂರಿನಲ್ಲಿ ಜೆಡಿಎಸ್​ ರಥಯಾತ್ರೆ.. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಹೆಚ್​ಡಿಕೆ

ಜೆಡಿಎಸ್​ ರಥಯಾತ್ರೆಯು ತುಮಕೂರು ಜಿಲ್ಲೆಗೆ ಕಾಲಿಟ್ಟಿದ್ದು, ಮಾಜಿ ಮುಖ್ಯಮಂತ್ರಿ ಹೆಚ್ ​​​ಡಿ ಕುಮಾರಸ್ವಾಮಿಯವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

jds-pancharathna-rathayathre-at-tumkur
ತುಮಕೂರಿನಲ್ಲಿ ಜೆಡಿಎಸ್​ ರಥಯಾತ್ರೆ : ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಹೆಚ್​ಡಿಕೆ
author img

By

Published : Dec 1, 2022, 3:39 PM IST

ತುಮಕೂರು : ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ಪ್ರಾರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್ ​​​ಡಿ ಕುಮಾರಸ್ವಾಮಿಯವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈಗಾಗಲೇ ಮೂರು ಜಿಲ್ಲೆಗಳಲ್ಲಿ ಜೆಡಿಎಸ್​ ರಥಯಾತ್ರೆ ಯಶಸ್ವಿಯಾಗಿದ್ದು, ತುಮಕೂರು ಜಿಲ್ಲೆಗೆ ಪಂಚರತ್ನ ರಥಯಾತ್ರೆ ಕಾಲಿಟ್ಟಿದೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕ್ರಮಗಳಲ್ಲಿ ರೌಡಿಶೀಟರ್ ಗಳು ಭಾಗಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಅದಕ್ಕೆಲ್ಲ ಪ್ರಾಮುಖ್ಯತೆ ಕೊಡಲ್ಲ‌. ನನ್ನ ಗುರಿ ಇರೋದು ಪಂಚರತ್ನ ಯಾತ್ರೆ ಮೂಲಕ ನಾಡಿನ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು. ಯಾರ ಪಕ್ಷದಲ್ಲಿ ಯಾರನ್ನು ಸೇರಿಸಿಕೊಳ್ತಾರೆ, ಯಾರನ್ನು ಕಳುಹಿಸ್ತಾರೆ ಎಂಬುದು ನನಗೆ ಬೇಡದ ವಿಚಾರವಾಗಿದೆ ಎಂದರು.

ತುಮಕೂರು ನಗರ ಕ್ಷೇತ್ರದಲ್ಲಿ ಟಿಕೆಟ್ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ ಹೆಚ್​ ಡಿಕೆ, ಎರಡು ಬಾರಿ ಕಡಿಮೆ ಅಂತರದಲ್ಲಿ ಸೋತ ಗೋವಿಂದರಾಜು ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿಕೊಂಡು ಬಂದಿದ್ದಾರೆ‌. ಗೋವಿಂದರಾಜುಗೆ ಟಿಕೆಟ್ ಕೊಡಲು ತೀರ್ಮಾನ ಆಗಿದೆ. ಇದರ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಜೆಡಿಎಸ್​ ರಥಯಾತ್ರೆ : ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಹೆಚ್​ಡಿಕೆ

ತುಮಕೂರಿನ 11 ಕ್ಷೇತ್ರದಲ್ಲಿ ಜೆಡಿಎಸ್​ಗೆ ಗೆಲುವು : ತಿಪಟೂರು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಯಾವುದೇ ಅಭ್ಯರ್ಥಿ ಇಲ್ಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೂಕ್ತ ಅಭ್ಯರ್ಥಿಯನ್ನು ಹಾಕಲಾಗುವುದು. ಈ ಬಾರಿ ಶಿರಾದಲ್ಲಿಯೂ ಕೂಡಾ ಜೆಡಿಎಸ್ ಗೆಲ್ಲುತ್ತೆ. ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುತ್ತೆ. ಈ ಬಾರಿ ಅತಂತ್ರ ಫಲಿತಾಂಶ ಬರುವ ಪ್ರಶ್ನೆಯೇ ಇಲ್ಲ. ಇನ್ನು ಜೆಡಿಎಸ್​​ 123 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದೇ ಬರುತ್ತದೆ. ಹಂತ ಹಂತವಾಗಿ ಇಡೀ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ಹೋಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್ ನ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಪ್ರಕಟ : ಶುಭ ಗಳಿಗೆ ನೋಡಿಕೊಂಡು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ರಾಜಕೀಯದ ಸುನಾಮಿ ಅಲೆ ಜೆಡಿಎಸ್ ಪರವಾಗಿ ಎದ್ದಿದೆ. ಎಲ್ಲಾ ರಾಜಕೀಯ ಪಕ್ಷಗಳು ಇದರಲ್ಲಿ ಕೊಚ್ಚಿಹೋಗುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಫರ್ಧೆ ಮಾಡುವ ವಿಚಾರವಾಗಿ, ವರುಣಾದಲ್ಲೂ ನಾವು ಅಭ್ಯರ್ಥಿ ಹಾಕಿದ್ದೇವೆ. ವರುಣದಿಂದ ನಮ್ಮ‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಹೆಚ್​ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಕೊಬ್ಬರಿ ಬೆಲೆ ಕುಸಿತ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯಲ್ಲಿ ರೈತ ಚೈತನ್ಯ ಕಾರ್ಯಕ್ರಮದ ಮೂಲಕ ಕೊಬ್ಬರಿ ಬೆಲೆ ಕುರಿತು ಒತ್ತು ಕೊಡಲಾಗುವುದು. ಬೆಲೆ ಕುಸಿತ ಸೇರಿದಂತೆ ರಾಜ್ಯ ಸರ್ಕಾರದಿಂದಲೇ ಪರಿಹಾರ ಕೊಡಲಾಗುವುದು, ರೈತರಿಗೆ ಆರ್ಥಿಕ ಶಕ್ತಿ ತುಂಬಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : 'ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ರೌಡಿಗಳು ಪರೇಡ್ ನಡೆಸಲು ಸಜ್ಜಾಗಿದ್ದಾರೆ': ಕಾಂಗ್ರೆಸ್ ಟ್ವೀಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.